Saturday, June 6, 2026
Homeಅಪರಾಧಬೆಳ್ತಂಗಡಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ-ಆರೋಪಿಗೆ ಏಳು ವರ್ಷ ಕಠಿಣ ಜೈಲು ಶಿಕ್ಷೆ...!

ಬೆಳ್ತಂಗಡಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ-ಆರೋಪಿಗೆ ಏಳು ವರ್ಷ ಕಠಿಣ ಜೈಲು ಶಿಕ್ಷೆ…!

- Advertisement -
- Advertisement -

ಬೆಳ್ತಂಗಡಿ: ಏಳು ವರ್ಷಗಳ ಹಿಂದೆ ದಲಿತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಬಸ್ಸಿನಲ್ಲಿ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಕೇಪು ಗ್ರಾಮದ ನೀರ್ಕಜೆಯ ನಿವಾಸಿ ನಿತಿನ್(27)ಗೆ ಏಳು ವರ್ಷ ಕಠಿಣ ಸಜೆ ಮತ್ತು 15 ಸಾವಿರ ರೂ. ದಂಡ ವಿಧಿಸಿದೆ. ಮಂಗಳೂರಿನ ಒಂದನೇ ತ್ವರಿತ ಸೆಷನ್ಸ್ ನ್ಯಾಯಾಲಯವು ತೀರ್ಪು ನೀಡಿದೆ.

ಬಾಲಕಿಯ ಅಪಹರಣ ಕೃತ್ಯಕ್ಕೆ 3 ವರ್ಷ ಕಠಿಣ ಶಿಕ್ಷೆ ಮತ್ತು 5 ಸಾವಿರ ರೂ. ದಂಡ ಹಾಗೂ ದಂಡ ತೆರಲು ತಪ್ಪಿದ್ದಲ್ಲಿ 15 ದಿನಗಳ ಕಠಿಣ ಶಿಕ್ಷೆ, ಅತ್ಯಾಚಾರ ಎಸಗಿದ್ದಕ್ಕೆ 7 ವರ್ಷ ಕಠಿಣ ಸಜೆ ಮತ್ತು 10 ಸಾವಿರ ರೂ. ದಂಡ ಹಾಗೂ ದಂಡ ಪಾವತಿಸಲು ತಪ್ಪಿದರೆ 2 ತಿಂಗಳ ಕಠಿಣ ಸಜೆ ಎಂದು ತೀರ್ಪು ನೀಡಿದೆ.

ಇನ್ನು ಮಂಗಳೂರಿನ ಒಂದನೇ ತ್ವರಿತ ನ್ಯಾಯಾಲಯದ ನ್ಯಾಯಾಧೀಶೆ ಸಾವಿತ್ರಿ ಭಟ್ ವಿಚಾರಣೆ ನಡೆಸಿ ನಿತಿನ್ ತಪ್ಪಿತಸ್ಥ ಎಂದು ಘೋಷಿಸಿದ್ದು, ಸರ್ಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕರಾದ ಸಿ. ವೆಂಕಟರಮಣ ಸ್ವಾಮಿ ವಾದಿಸಿದ್ದರು.

- Advertisement -

Latest News

error: Content is protected !!