- Advertisement -
- Advertisement -
ಬೆಂಗಳೂರು: ಪುತ್ತೂರು ಮೂಲದ 47 ವರ್ಷದ ಮಹಿಳೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪುತ್ತೂರಿನ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ್ದಾರೆ ಎಂದು ದೂರು ದಾಖಲಿಸಿದ್ದರು. ದೂರು ದಾಖಲಾದ ಬೆನ್ನಲ್ಲೇ ಅರುಣ್ ಕುಮಾರ್ ಪುತ್ತಿಲ ಅವರು ಪುತ್ತೂರಿನ ಪ್ರಿನ್ಸಿಪಾಲ್ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ಪಡೆದಿದ್ದರು. ಇನ್ನು ನಿನ್ನೆ ಸಂತ್ರಸ್ತೆ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅಲ್ಲದೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹೇಳಿಕೆ ದಾಖಲಿಸಲಾಗಿತ್ತು.
ಇಂದು ಮಹಿಳೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ 2023 ರಲ್ಲಿ ನನ್ನ ಮೇಲೆ ಪುತ್ತಿಲ ಲೈಂಗಿಕ ದೌರ್ಜನ್ಯ ಎಸಗಿದ್ದರು ಅಂತಾ ಏನು ಆರೋಪ ಮಾಡಿದ್ದರೋ ಆ ಹೋಟೆಲ್ ನಲ್ಲಿ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.ಪುತ್ತೂರು ನಗರ ಠಾಣೆಯ ಇನ್ಸ್ಪೆಕ್ಟರ್ ಸತೀಶ್ ಜಿ ಜೆ ನೇತೃತ್ವದ ತಂಡ ಸ್ಥಳ ಮಹಜರು ನಡೆಸಿದೆ.
- Advertisement -