Thursday, June 4, 2026
Homeಕರಾವಳಿಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿ ಅರೆಸ್ಟ್: ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿ ಅರೆಸ್ಟ್: ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

- Advertisement -
- Advertisement -

ಬೆಳ್ತಂಗಡಿ : ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರೋ ಘಟನೆ ಬೆಳ್ತಂಗಡಿ ತಾಲೂಕಿನ  ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ ನಡೆದಿದೆ.

ನಾವೂರು ನಿವಾಸಿ ಜನಾರ್ಧನ ಪೂಜಾರಿ(42) ಎಂಬಾತ 14 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಕ್ಟೋಬರ್ 22 ರಂದು 10 ಗಂಟೆ ಸುಮಾರಿಗೆ  ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ. ಬಳಿಕ  ಕುವೆಟ್ಟು ಗ್ರಾಮದ ಮದ್ದಡ್ಕ ಬಳಿಯ ಸ್ನೇಹಿತನ ರೂಮಿನಲ್ಲಿ ಬಾಲಕಿ ಮೇಲೆ ಲೈಗಿಂಕ ದೌರ್ಜನ್ಯವೆಸಗಿದ್ದಾನೆ.

ಭಯದಿಂದ ಆರಂಭದಲ್ಲಿ ವಿಚಾರವನ್ನು ಮನೆಯವರಿಗೆ ತಿಳಿಸದ ಬಾಲಕಿ ಬಳಿಕ ಅಕ್ಟೋಬರ್ 26 ರಂದು ಮನೆಯವರಿಗೆ ತಿಳಿಸಿದ್ದಾಳೆ. ಕೂಡಲೇ ಮನೆಯವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!