Thursday, September 24, 2026
Homeಕರಾವಳಿಮಂಗಳೂರುಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

- Advertisement -
- Advertisement -

ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಕಾನೂನು ಸಂಘರ್ಷಕ್ಕೆ ಒಳಗಾದ ಕೇರಳ ಮೂಲದ ಬಾಲಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ: ಬಾಲಕ ಹಾಗೂ ಸಂತ್ರಸ್ತ ಅಪ್ರಾಪ್ತ ಬಾಲಕಿಗೆ ಮೊಬೈಲ್ ಮೂಲಕ ಪರಿಚಯವಾಗಿ ಸಂಪರ್ಕದಲ್ಲಿದ್ದರು. 2025ರ ಡಿಸೆಂಬರ್ 21ರಂದು ಬಾಲಕನು ಸಂತ್ರಸ್ತೆಯನ್ನು ತನ್ನ ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದನೆನ್ನಲಾಗಿದೆ.

ಇತ್ತೀಚೆಗೆ ಅಂದರೆ 2026ರ ಸೆಪ್ಟೆಂಬರ್ 8ರಂದು ಬಾಲಕಿಯ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಸೆಪ್ಟೆಂಬರ್ 9ರಂದು ಸಂತ್ರಸ್ತ ಬಾಲಕಿಯು ಮಗುವಿಗೆ ಜನ್ಮ ನೀಡಿದ್ದಾಳೆ.

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಶೂನ್ಯ ಅಪರಾಧ ಸಂಖ್ಯೆ (Zero FIR) 01/2026ರಲ್ಲಿ ಪೋಕ್ಸೋ ಕಾಯ್ದೆ 2012 ಹಾಗೂ BNS 2023ರ ವಿವಿಧ ಕಾಯ್ದೆಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಘಟನೆ ನಡೆದ ಸ್ಥಳದ ವ್ಯಾಪ್ತಿಯ ಆಧಾರದ ಮೇಲೆ ಮುಂದಿನ ಕಾನೂನು ಕ್ರಮಕ್ಕಾಗಿ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಪ್ರಕರಣವನ್ನು ವರ್ಗಾಯಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!