- Advertisement -
![]()
- Advertisement -
ಮಂಗಳೂರು: ನಗರದ ಶಾಲೆ ಒಂದರಲ್ಲಿ 6ನೇ ತರಗತಿಯ ವಿದ್ಯಾರ್ಥಿನಿಗೆ ಶಾಲಾ ವಾಹನದ ಚಾಲಕನೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆರೋಪಿಯನ್ನು ಮಂಗಳೂರು ಮಹಿಳಾ ಠಾಣೆಯ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
ಪ್ರತಿ ದಿನ ಶಾಲೆಗೆ ವಾಹನದಲ್ಲಿ ತೆರಳುತ್ತಿದ್ದಳು. ಈ ವೇಳೆ ಬಾಲಕಿಗೆ ವಾಹನದ ಚಾಲಕನೇ ಲೈಂಗಿಕ ಕಿರುಕುಳ ನೀಡಿದ್ದಾನೆ. ಈತ ಕಿರುಕುಳ ನೀಡಿರುವ ಬಗ್ಗೆ ಬಾಲಕಿ ಹೆತ್ತವರಿಗೆ ತಿಳಿಸಿದ್ದಾಳೆ.
ಈ ಬಗ್ಗೆ ಪೊಕ್ಸೊ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
- Advertisement -


