Saturday, May 18, 2024
Homeಅಪರಾಧಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ- ಆರೋಪಿಗೆ ನಾಳೆ ಜಾಮೀನು ಅರ್ಜಿ ವಿಚಾರಣೆ..!

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ- ಆರೋಪಿಗೆ ನಾಳೆ ಜಾಮೀನು ಅರ್ಜಿ ವಿಚಾರಣೆ..!

spot_img
- Advertisement -
- Advertisement -

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಇಂದು ಕೋರ್ಟ್‌ಗೆ ಶರಣಾದ ಕೆ .ಎಸ್.ಎನ್ ರಾಜೇಶ್ ಭಟ್ ಅವರ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮಾನ್ಯ ನ್ಯಾಯಧೀಶರು ಆದೇಶ ಹೊರಡಿಸಿದ್ದು, ನಾಳೆ ಅರ್ಜಿ ವಿಚಾರಣೆ ನಡೆಯಲಿದೆ.

ಎರಡು ತಿಂಗಳಿನಿಂದ ಪೊಲೀಸರ ಕಣ್ತಪ್ಪಿಸಿ ಓಡಾಡಿದ್ದ ವಕೀಲ ಇಂದು ಮಧ್ಯಾಹ್ನ ಮೂರು ಗಂಟೆಗೆ ದಿಢೀರ್ ಆಗಿ ಮಂಗಳೂರಿನ ಮೂರನೇ ಜೆಎಂಎಫ್ ಕೋರ್ಟಿಗೆ ಹಾಜರಾಗಿದ್ದರು. ಹಿರಿಯ ವಕೀಲ ಎಸ್.ಪಿ.ಚೆಂಗಪ್ಪ ಅವರು ಕೆ.ಎಸ್.ಎನ್. ರಾಜೇಶ್ ಭಟ್ ಅವರನ್ನು ನ್ಯಾಯಾಲಯಕ್ಕೆ ಶರಣಾಗಿಸಿ, ಮಧ್ಯಂತರ ಜಾಮೀನಿಗೆ ಅರ್ಜಿ ಹಾಕಿದ್ದರು. ಈ ವಿಚಾರ ತಿಳಿಯದ ಪೊಲೀಸರು ಕೋರ್ಟಿನತ್ತ ಧಾವಿಸಿ ಬಂದರು.

ಸಂಜೆ 5 ಗಂಟೆ ವೇಳೆಗೆ ಮಧ್ಯಂತರ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಕೋರ್ಟ್, ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದ್ದಲ್ಲದೆ, ಆರೋಪಿ ವಕೀಲನಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದೇ ವೇಳೆ, ವಕೀಲರು ತನ್ನ ಕಕ್ಷಿದಾರ ಕೆ.ಎಸ್.ಎನ್. ರಾಜೇಶ್ ಭಟ್ ಗೆ ಅನಾರೋಗ್ಯ ಇರುವುದರಿಂದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲು ಅನುವು ಮಾಡಬೇಕೆಂದು ಕೇಳಿಕೊಂಡಿದ್ದಾರೆ. ಅದರಂತೆ, ವಕೀಲ ಜೈಲುವಾಸದಿಂದ ಸದ್ಯಕ್ಕೆ ತಪ್ಪಿಸಿಕೊಂಡಿದ್ದಾರೆ. ಕೋರ್ಟ್ ಆದೇಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಕೀಲ ಎಸ್.ಪಿ.ಚೆಂಗಪ್ಪ, ಕೋರ್ಟ್‌ ಸದ್ಯಕ್ಕೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆದರೆ, ನಾಳೆ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದ್ದು ಮುಂದಿನದ್ದು ನಿರ್ಧಾರ ಆಗಲಿದೆ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!