Thursday, June 4, 2026
Homeಕರಾವಳಿಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಪೋಕ್ಸೋ ಕಾಯ್ದೆಯಡಿ ಆರೋಪಿ ಅರೆಸ್ಟ್

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಪೋಕ್ಸೋ ಕಾಯ್ದೆಯಡಿ ಆರೋಪಿ ಅರೆಸ್ಟ್

- Advertisement -
- Advertisement -

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಆರೋಪಿ ಮಹಮ್ಮದ್ ರಝೀನ್ ಎಂಬಾತನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಮೂಲದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

17 ವರ್ಷ ವಯಸ್ಸಿನ ದಲಿತ ಬಾಲಕಿಗೆ ಪ್ರೀತಿಸುವುದಾಗಿ ಹೇಳಿ ಮಂಗಳೂರಿಗೆ ಕರೆಸಿಕೊಂಡಿದ್ದ ಆರೋಪಿ ಮಂಗಳೂರಿನ ಕುಂಪಲದ ಬಾಡಿಗೆ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಆರೋಪಿ ವಿರುದ್ದ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧನ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Latest News

error: Content is protected !!