Wednesday, June 3, 2026
Homeಅಪರಾಧಮಂಗಳೂರು: ಮಹಿಳಾ ಸಹೋದ್ಯೋಗಿಗಳಿಗೆ ಲೈಂಗಿಕ ಕಿರುಕುಳ ಪ್ರಕರಣ...! ವೈದ್ಯಾಧಿಕಾರಿ ಡಾ.ರತ್ನಾಕರ್ ಪೊಲೀಸ್ ವಶಕ್ಕೆ...!

ಮಂಗಳೂರು: ಮಹಿಳಾ ಸಹೋದ್ಯೋಗಿಗಳಿಗೆ ಲೈಂಗಿಕ ಕಿರುಕುಳ ಪ್ರಕರಣ…! ವೈದ್ಯಾಧಿಕಾರಿ ಡಾ.ರತ್ನಾಕರ್ ಪೊಲೀಸ್ ವಶಕ್ಕೆ…!

- Advertisement -
- Advertisement -

ಮಂಗಳೂರು: ಮಹಿಳಾ ಸಹೋದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವೈದ್ಯಾಧಿಕಾರಿ ಡಾ. ರತ್ನಾಕರ್ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಡಾ. ರತ್ನಾಕರ್ ಮಹಿಳಾ ಸಹೋದ್ಯೋಗಿಗಳಿಗೆ ಕಿರುಕುಳ ನೀಡುತ್ತಿರುವ ವಿಡಿಯೋ ಮತ್ತು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್. ಆರೋಪಿ ಡಾ.ರತ್ನಾಕರ್ ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಅಧಿಕಾರಿಯಿಂದ ಕಿರುಕುಳಕ್ಕೊಳಗಾದ ಮಹಿಳೆಯರು ದೂರು ನೀಡಲು ನಿರಾಕರಿಸಿದ್ದು, ತನಿಖೆಯ ಸಮಯದಲ್ಲಿ ಮಹಿಳೆಯರು ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದರು.

ಇದೇ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಕಾರ್ಯಕ್ರಮ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯಾಧಿಕಾರಿ ಡಾ. ರತ್ನಾಕರ್ ರನ್ನು ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.

- Advertisement -

Latest News

error: Content is protected !!