Monday, August 31, 2026
Homeಕರಾವಳಿಮಂಗಳೂರು: ಬಾಲಕಿಗೆ ಲೈಂಗಿಕ ದೌರ್ಜನ್ಯ - ಬಸ್ ಚಾಲಕ ಅರೆಸ್ಟ್

ಮಂಗಳೂರು: ಬಾಲಕಿಗೆ ಲೈಂಗಿಕ ದೌರ್ಜನ್ಯ – ಬಸ್ ಚಾಲಕ ಅರೆಸ್ಟ್

- Advertisement -
- Advertisement -

ಮಂಗಳೂರು: ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ನಗರದ ಬಸ್ ಚಾಲಕನೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಾಗಲಕೋಟೆ ಮೂಲದ ದಯಾನಂದ(32) ಎಂಬಾತನೆ ಬಂಧಿತ ಆರೋಪಿಯಾಗಿದ್ದಾನೆ.

ಆರೋಪಿ ದಯಾನಂದ ನಗರದಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಈತ 13 ವರ್ಷದ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ಬಾಲಕಿಯ ಪೋಷಕರು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ಬಗ್ಗೆ ಪೋಕ್ಸೊ ಪ್ರಕರಣ ದಾಖಲಿಸಿಕೊಂಡ ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

Latest News

error: Content is protected !!