Monday, June 8, 2026
Homeಕರಾವಳಿಮಂಗಳೂರುಸುಳ್ಯ; ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ; ಕೆಲವು ಯುವಕರನ್ನು ವಿಚಾರಣೆಗೊಳಪಡಿಸಿದ ಪೊಲೀಸರು

ಸುಳ್ಯ; ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ; ಕೆಲವು ಯುವಕರನ್ನು ವಿಚಾರಣೆಗೊಳಪಡಿಸಿದ ಪೊಲೀಸರು

- Advertisement -
- Advertisement -

ಸುಳ್ಯ; ಇಲ್ಲಿನ ಗಾಂಧಿನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಕೆಲವು ಯುವಕರನ್ನು ವಿಚಾರಣೆಗೊಳಪಡಿಸಿದ ಘಟನೆ ನಡೆದಿದೆ.

ಗಾಂಧಿನಗರದ  ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಉತ್ತರ ಕರ್ನಾಟಕ ಮೂಲದ ಕಾರ್ಮಿಕ ಕುಟುಂಬದ ಬಾಲಕಿಗೆ ಅದೇ ಭಾಗದ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದ. ವಿಷಯ ಮನೆಯವರಿಗೆ ತಿಳಿಯುತ್ತಿದ್ದಂತೆ ಯುವಕ ಪರಾರಿಯಾಗಿದ್ದಾನೆ.

ಬಾಲಕಿ  ಯುವತಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಆರೋಪಿ ಯುವಕ ಆಕೆಯ ಮನೆಗೆ ತೆರಳಿ ಲೈಂಗಿಕ ದೌರ್ಜನ್ಯ ನಡೆಸಿದ್ದ ಎನ್ನಲಾಗಿದೆ. ಈ ಘಟನೆಯ  ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಮನೆಯವರು ದೂರು ನೀಡಿದ್ದು, ಪೊಲೀಸರು ಘಟನೆಯ ಮನೆಯ ಪಕ್ಕದ ಕೆಲ ಯುವಕರನ್ನು ವಿಚಾರಣೆಗೆ ಒಳಪಡಿಸಿ ಸ್ಥಳಿಯ ಸಿಸಿ ಕ್ಯಾಮರಾ ಪರಿಶೀಲಿಸಲಾಗುತ್ತಿದ್ದು ತನಿಖೆ ಮುಂದುವರಿದಿದೆ ಎನ್ನಲಾಗಿದೆ.

- Advertisement -

Latest News

error: Content is protected !!