Saturday, June 6, 2026
Homeಕರಾವಳಿವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಬಂಟ್ವಾಳದ ಯುವಕನ ಬಂಧನ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಬಂಟ್ವಾಳದ ಯುವಕನ ಬಂಧನ

- Advertisement -
- Advertisement -

ಕಾಸರಗೋಡು:ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳದ ಯುವಕನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.ಬಿ.ಸಿ ರೋಡ್ ನ ಮುಹಮ್ಮದ್ ಇಬ್ರಾಹಿಂ ತೌಫಿಕ್ (23) ಬಂಧಿತ ಆರೋಪಿ.

ತೌಫಿಕ್ ಇನ್ಸ್ಟಾಗ್ರಾಂ ಮೂಲಕ ಪರಿಚಯವಾದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾರ್ಥಿನಿಯೊಬ್ಬಳಿಗೆ ಆಮಿಷ ಒಡ್ಡಿ ವಿವಿಧೆಡೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.ಈ ಬಗ್ಗೆ ನೀಡಿದ ದೂರಿನಂತೆ ತನಿಖೆ ನಡೆಸಿದ ಮಂಜೇಶ್ವರ ಪೊಲೀಸರು ತೌಫಿಕ್ ನನ್ನು ಬಂಧಿಸಿದ್ದಾರೆ.

- Advertisement -

Latest News

error: Content is protected !!