Saturday, June 6, 2026
Homeಅಪರಾಧಉಳ್ಳಾಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ- ಆರೋಪಿ ಅರೆಸ್ಟ್

ಉಳ್ಳಾಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ- ಆರೋಪಿ ಅರೆಸ್ಟ್

- Advertisement -
- Advertisement -

ಉಳ್ಳಾಲ: ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಗೆ ಆಲಂಕಾರುಗುಡ್ಡೆ ಬಳಿ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ ಆರೋಪಿಯನ್ನು ಇಂದು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕೆ.ಸಿ ರೋಡ್ ನಿವಾಸಿ ಅಬ್ದುಲ್ ರಾಶಿಕ್ ಎಂದು ತಿಳಿದು ಬಂದಿದೆ.

ಈ ಹಿಂದೆ ಆರೋಪಿ ರಾಶಿಕ್ ಉಚ್ಚಿಲದಲ್ಲಿ ಮತ್ತೊಂದು ಅಪ್ರಾಪ್ತ ಬಾಲಕಿಗೂ ಕಿರುಕುಳ ನೀಡಿದ್ದು ಈತನ ವಿರುದ್ಧ ಪ್ರಕರಣವುದಾಖಲಾಗಿದೆ.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದು, ಇದೇ ರೀತಿಯ ಹೆಚ್ಚಿನ ಅಪರಾಧಗಳಲ್ಲಿ ಭಾಗಿಯಾಗಿರುವ ಬಗ್ಗೆ ತಿಳಿಯಲು ಸಿಸಿಬಿ ಅಧಿಕಾರಿಗಳು ರಾಶಿಕ್ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!