Friday, June 5, 2026
Homeಅಪರಾಧವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ - ಆಟೋ ಚಾಲಕ ಅರೆಸ್ಟ್

ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆಟೋ ಚಾಲಕ ಅರೆಸ್ಟ್

- Advertisement -
- Advertisement -

ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನಲೆಯಲ್ಲಿ ಆಟೋ ಚಾಲಕನೋರ್ವನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಂಬಳಬೆಟ್ಟು ನಿವಾಸಿ ಆಟೋ ಚಾಲಕ ಅಬ್ದುಲ್‌ ನಾಸಿರ್‌ ಎಂದು ಗುರುತಿಸಲಾಗಿದೆ.

ಅಬ್ದುಲ್‌ ನಾಸಿರ್‌ ತನ್ನ ಪರಿಚಯಸ್ಥ ಅಪ್ರಾಪ್ತ ವಯಸ್ಕ ಬಾಲಕಿಯನ್ನು ತನ್ನ ಆಟೋದಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ಎನ್ನಲಾಗಿದೆ. ಮನೆಗೆ ಬಾರದಂತೆ ಎಚ್ಚರಿಕೆ ನೀಡಿದ ಮೇಲೂ ಬಾಲಕಿಯ ಮನೆಗೆ ಆಗ್ಗಾಗ್ಗೆ ಬರುತ್ತಿದ್ದ ಎನ್ನಲಾಗಿದೆ.

ಹೀಗಾಗಿ ಬಾಲಕಿಯನ್ನು ಮನೆಯವರು ವಿಚಾರಣೆ ನಡೆಸಿದಾಗ ಆತ ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ. ಬಾಲಕಿಯ ತಾಯಿ ವಿಟ್ಲ ಪೊಲೀಸರಿಗೆ ದೂರು ನೀಡಿದ್ದು, ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

- Advertisement -

Latest News

error: Content is protected !!