Saturday, June 6, 2026
Homeಅಪರಾಧಮಂಗಳೂರು: ಔಷಧಿ ಕೊಡುವ ನೆಪದಲ್ಲಿ ಮನೆಗೆ ಬಂದು ಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನ - ಆರೋಪಿ...

ಮಂಗಳೂರು: ಔಷಧಿ ಕೊಡುವ ನೆಪದಲ್ಲಿ ಮನೆಗೆ ಬಂದು ಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನ – ಆರೋಪಿ ಅರೆಸ್ಟ್

- Advertisement -
- Advertisement -

ಮಂಗಳೂರು: ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ‌ವಿಧವೆ ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ವೇಳೆ ಸ್ಥಳೀಯರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ಗೂಸಾ ತಿಂದು ಪೋಲಿಸರ ಅತಿಥಿಯಾದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಮೊಹಮ್ಮದ್ ಇಕ್ಬಾಲ್ (52) ತಂದೆ ಅಬೂಬಕ್ಕರ್, ಕೆಂಚನಕೆರೆ‌ ಎಂದು ಗುರುತಿಸಲಾಗಿದೆ.


ಬಜ್ಪೆ ಠಾಣಾ ವ್ಯಾಪ್ತಿಯ ಕೊಳಂಬೆ ಗ್ರಾಮದ ಕಜೆಕೋಡಿ ಹೌಸ್ ಎಂಬಲ್ಲಿ ಔಷಧಿ ಮಾರುವ ನೆಪದಲ್ಲಿ‌ ಮನೆಗೆ ಬಂದ ಆರೋಪಿ ಕಸ್ತೂರಿ ಮಾತ್ರೆಗಳನ್ನು ನೀಡುವ ನೆಪದಲ್ಲಿ ಮನೆಯಲ್ಲಿದ್ದ ವಿಧವೆ ಒಂಟಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಈ ವೇಳೆ ಆ ಒಂಟಿ ಮಹಿಳೆ ಕಿರುಚಿದ್ದು, ಸಾರ್ವಜನಿಕರು ಕೂಡಲೇ ಮನೆ ಬಳಿ ಜಮಾಯಿಸಿದ್ದಾರೆ ಎನ್ನಲಾಗಿದೆ. ನಂತರ ಕಾಮುಕನಿಗೆ ಹಿಗ್ಗಾಮುಗ್ಗಾ ಧರ್ಮದೇಟು ಬಿದ್ದಿದ್ದು, ಬಜ್ಪೆ ಪೋಲಿಸರ ವಶಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆ ನೀಡಿದ ದೂರಿನಂತೆ ಪಾಂಡೇಶ್ವರ ಮಹಿಳಾ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯಲ್ಲಿ ಒಬ್ಬಂಟಿಯಾಗಿರುವ ಮಹಿಳೆಯರು ಅಪರಿಚಿತರಿಗೆ ವ್ಯಾಪಾರದ ನೆಪದಲ್ಲಿ ಮನೆಯ ಆವರಣ ಪ್ರವೇಶಿಸಲು ಬಿಡದೇ ಜಾಗೃತವಾಗಿರಬೇಕು ಎಂಬ ಒಕ್ಕಣೆಯ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

- Advertisement -

Latest News

error: Content is protected !!