- Advertisement -
- Advertisement -
ಪುತ್ತೂರು: 2013ರಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ರಾಜಸ್ಥಾನ ಮೂಲದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ.ರಾಜಸ್ಥಾನದ ಗಂಗಾಪುರ ತಾಲೂಕಿನ ಭಗವಾನ್ ಸಿಂಗ್ ಬಂಧಿತ ಆರೋಪಿ.
2013ರಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಈತನನ್ನು ಬಂಧಿಸಿದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ನ್ಯಾಯಾಲಯದಿಂದ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಭಗವಾನ್ ಸಿಂಗ್ ಆ ಬಳಿಕ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ನ್ಯಾಯಾಲಯ ಆತನ ಬಂಧನಕ್ಕೆ ವಾರಂಟ್ ಜಾರಿಗೊಳಿಸಿತ್ತು. ಈತ ವಿಟ್ಲದ ಕೋಡಪದವು ಎಂಬಲ್ಲಿಗೆ ಆಗಮಿಸುವ ಮಾಹಿತಿ ಅರಿತ ಪುತ್ತೂರು ನಗರ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
- Advertisement -
