Saturday, August 29, 2026
Homeಕರಾವಳಿಸುಳ್ಯ: ಪಿಯುಸಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಯ ಬಂಧನ

ಸುಳ್ಯ: ಪಿಯುಸಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಯ ಬಂಧನ

- Advertisement -
- Advertisement -

ಸುಳ್ಯ ಪಿಯುಸಿ ವಿದ್ಯಾರ್ಥಿನಿಯೊರ್ವಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಸುಳ್ಯ ತಾಲೂಕಿನ ಮಂಕೆಕೋಲಿನ ಯುವಕನೊಬ್ಬನನ್ನು ಬಂಧಿಸಲಾಗಿದೆ. ಮಂಡೆಕೋಲಿನ ಅಂಬ್ರೋಟಿ ಕಕ್ಕಾಜೆ ನಿವಾಸಿ ಅಶ್ವಿನ್ ಬಂಧಿತ ಆರೋಪಿ.

ಅಶ್ವಿನ್ ಮುರುಳ್ಯ ಗ್ರಾಮದ ಪಿಯುಸಿ ವಿದ್ಯಾರ್ಥಿನಿಯೊಬ್ಬಳನ್ನು ಪರಿಚಯ ಮಾಡಿಕೊಂಡು ಆಕೆಯ ಜೊತೆ ನಿರಂತರ ಸಂಪರ್ಕದಲ್ಲಿದ್ದ. ಏಪ್ರಿಲ್ ತಿಂಗಳಿನಲ್ಲಿ ಆಕೆಯನ್ನು ಸುಳ್ಯಕ್ಕೆ ಬರಲು ಹೇಳಿ ಲಾಡ್ಜೊಂದಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಬಗ್ಗೆ ವಿದ್ಯಾರ್ಥಿನಿಯ ತಾಯಿ ಮೇ . 9 ರಂದು ನೀಡಿದ ದೂರಿನನ್ವಯ ಪುತ್ತೂರು ಮಹಿಳಾ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

Latest News

error: Content is protected !!