Thursday, May 2, 2024
Homeಕರಾವಳಿಜೈಲಿನಿಂದಲೇ ನಾಮಪತ್ರ ಸಲ್ಲಿಸಿದ ಪುತ್ತೂರು ಎಸ್​ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ

ಜೈಲಿನಿಂದಲೇ ನಾಮಪತ್ರ ಸಲ್ಲಿಸಿದ ಪುತ್ತೂರು ಎಸ್​ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ

spot_img
- Advertisement -
- Advertisement -

ಮಂಗಳೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಎಸ್​ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ ಅವರು ಜೈಲಿನಿಂದಲೇ ತಮ್ಮ ಏಜೆಂಟ್ ಮೂಲಕ ನಾಮಪತ್ರ ಸಲ್ಲಿಸಿದ್ದಾರೆ.

ಪಕ್ಷದ ಸಭೆ ನಡೆಸಿ ಪುತ್ತೂರು ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಅವರನ್ನು ಆಯ್ಕೆ ಮಾಡಲಾಗಿತ್ತು. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಶಾಫಿ ಬೆಳ್ಳಾರೆ ಸದ್ಯ ಜೈಲಿನಲ್ಲಿದ್ದಾರೆ. ಶಾಫಿ ಬೆಳ್ಳಾರೆ ಜೈಲಿನಿಂದಲೇ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಜೈಲಿನಿಂದಲೇ ನಾಮಪತ್ರ ಸಲ್ಲಿಸಲು ಅವಕಾಶವಿರುವುದರಿಂದ ತಮ್ಮ ಏಜೆಂಟರ ಮೂಲಕ ನಾಮಪತ್ರ ಸಲ್ಲಿಸಿದ್ದಾರೆ.

ಎಪಿಎಂಸಿ ರಸ್ತೆಯಲ್ಲಿರುವ ಪಕ್ಷದ ಕಚೇರಿಯಿಂದ ಕಾಲ್ನಡಿಗೆ ಮೆರವಣಿಗೆ ಮೂಲಕ ತಾಲೂಕು ಆಡಳಿತ ಸೌಧಕ್ಕೆ ತೆರಳಿ ನಾಮಪತ್ರ ಸಲ್ಲಿಸಿದರು. ಶಾಫಿ ಬೆಳ್ಳಾರೆಯವರ ಪರವಾಗಿ ಎಲೆಕ್ಷನ್ ಏಜೆಂಟ್ ಅಬ್ದುಲ್ ರಹಿಮಾನ್ ನಾಮಪತ್ರ ಸಲ್ಲಿಸಿದ್ದಾರೆ.

- Advertisement -
spot_img

Latest News

error: Content is protected !!