Thursday, June 4, 2026
Homeಕರಾವಳಿಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಫೀಕ್ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಪೊಲೀಸರು

ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಫೀಕ್ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಪೊಲೀಸರು

- Advertisement -
- Advertisement -

ಸುಳ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಶಫೀಕ್ ಬೆಳ್ಳಾರೆಯನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ನಿನ್ನೆ ಆತನನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಆರಂಭದಲ್ಲಿ ಶಫೀಕ್ ಬೆಳ್ಳಾರೆ ಹಾಗೂ ಝಾಕೀರ್ ಸವಣೂರು ಈ ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುವಡಿಸಿದ್ದರು. ಬಳಿಕ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದಿದ್ದರು. 5 ದಿನಗಳ ಬಳಿಕ ಮತ್ತೆ ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಝಾಕೀರ್ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಮತ್ತೆ ವಿಚಾರಣೆಗಾಗಿ ಶಫೀಕ್ ನನ್ನು ಪೊಲೀಸ್ ಕಸ್ಟಡಿಗೆ ಪಡೆದಿದ್ದರು. ಇದೀಗ ನಿನ್ನೆ ಆತನನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

- Advertisement -

Latest News

error: Content is protected !!