Wednesday, June 24, 2026
Homeತಾಜಾ ಸುದ್ದಿನಾಳೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಜಾರಿ ; ಬಸ್ ಕಂಡಕ್ಟರ್...

ನಾಳೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಜಾರಿ ; ಬಸ್ ಕಂಡಕ್ಟರ್ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ, ಮಹಿಳೆಯ ಬಹು ನಿರೀಕ್ಷಿತ ಯೋಜನೆ ಶಕ್ತಿ ಯೋಜನೆ’ಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಭಾನುವಾರ ಒಂದು ದಿನದ ಮಟ್ಟಿಗೆ ಬಸ್ ಕಂಡಕ್ಟರ್ ಆಗಲಿದ್ದಾರೆ.

ಮೆಜೆಸ್ಟಿಕ್ ನಿಂದ ವಿಧಾನಸೌಧಕ್ಕೆ ತೆರಳುವ ರೂಟ್ ನಂ.43 ರ ಬಸ್ ನಲ್ಲಿ ಕಂಡಕ್ಟರ್ ಆಗಿ ಟಿಕೆಟ್ ವಿತರಿಸುವ ಮೂಲಕ ಈ ಮಹತ್ವಕಾಂಕ್ಷಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಬಳಿಕ ವಿಧಾನಸೌಧದಲ್ಲಿ ನಡೆಯಲಿರುವ ಅದ್ಧೂರಿ ಕಾರ್ಯಕ್ರಮದಲ್ಲಿ ಶಕ್ತಿ ಯೋಜನೆಗೆ ಅಧಿಕೃತ ಚಾಲನೆ ನೀಡಲಿದ್ದಾರೆ.

ಮಹಿಳೆಯರಿಗಾಗಿ ಸಾರಿಗೆ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದ್ದು, ಜೂನ್ 11 ರ ನಾಳೆಯಿಂದ ಮಹಿಳೆಯರು ಉಚಿತವಾಗಿ ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಸಬಹುದಾಗಿದೆ.

- Advertisement -

Latest News

error: Content is protected !!