Saturday, May 4, 2024
Homeತಾಜಾ ಸುದ್ದಿಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಚಾಲನೆ: ಇನ್ಮೇಲೆ ಮಹಿಳೆಯರಿಗೆ ಬಸ್ ನಲ್ಲಿ ಉಚಿತ ಪ್ರಯಾಣ

ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಚಾಲನೆ: ಇನ್ಮೇಲೆ ಮಹಿಳೆಯರಿಗೆ ಬಸ್ ನಲ್ಲಿ ಉಚಿತ ಪ್ರಯಾಣ

spot_img
- Advertisement -
- Advertisement -

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಇಂದು ಚಾಲನೆ ದೊರೆತಿದೆ.  ವೇಳೆ ಸಾರಿಗೆ ಸಚಿವರು ಕಂಡಕ್ಟರ್ ಆದರೇ, ಟಿಕೆಟ್ ಕೊಟ್ಟು ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಗಮನ ಸೆಳೆದರು.

ಇಂದು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿದೆ.

ಈ ಬಳಿಕ ಮಾತನಾಡಿದ ಸಿಎಂ ಸಿದ್ಧರಾಮಯ್ಯ ಶಕ್ತಿ ಯೋಜನೆ ಮಹಿಳೆಯರಿಗಾಗಿ ಮಾಡಿರುವ ಕಾರ್ಯಕ್ರಮ. ಸಮಾಜದಲ್ಲಿ ಅರ್ಧದಷ್ಟಿರುವ ಮಹಿಳೆಯರು ಶತಮಾನಗಳಿಂದ ಶೋಷಣೆಗೆ ಒಳಗಾಗಿದ್ದಾರೆ. ಅಲ್ಪಸಂಖ್ಯಾತರು, ಮಹಿಳೆಯರು, ಅವಕಾಶಗಳಿಂದ ಹಾಗೂ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ ಎಂದರು.

ಹೆಣ್ಣುಮಕ್ಕಳು ಇಂದು ಒಂದು ಗಂಟೆಯಿಂದ ಸೌಲಭ್ಯವನ್ನು ಬಳಕೆ ಮಾಡಿಕೊಳ್ಳಬೇಕು. ಎಲ್ಲಾ ಮಹಿಳೆಯರಿಗೂ ಸ್ಮಾರ್ಟ್ ಕಾರ್ಡುಗಳನ್ನು ನೀಡಲಾಗುವುದು. ಈ ಯೋಜನೆ ವಿದ್ಯಾರ್ಥಿನಿಯರಿಗೂ ಅನ್ವಯವಾಗುತ್ತದೆ ಎಂದರಲ್ಲದೆ ಈ ಯೋಜನೆಗಳಲ್ಲಿ ಯಾರೂ ಮಧ್ಯವರ್ತಿಗಳಿಲ್ಲ. ನೇರವಾಗಿ ಫಲಾನುಭವಿಗಳಿಗೆ ತಲುಪುತ್ತದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಇದೇ ವೇಳೆ ಗುಲಾಬಿ ಬಣ್ಣದ ಸ್ಮಾರ್ಟ್, ಶಕ್ತಿ ಯೋಜನೆಯ ಲಾಂಛನವನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದರು.

- Advertisement -
spot_img

Latest News

error: Content is protected !!