Thursday, June 4, 2026
Homeತಾಜಾ ಸುದ್ದಿಮಾಜಿ ಕೇಂದ್ರ ಸಚಿವ ಮತ್ತು ಸಮಾಜವಾದಿ ನಾಯಕ ಶರದ್ ಯಾದವ್  ವಿಧಿವಶ

ಮಾಜಿ ಕೇಂದ್ರ ಸಚಿವ ಮತ್ತು ಸಮಾಜವಾದಿ ನಾಯಕ ಶರದ್ ಯಾದವ್  ವಿಧಿವಶ

- Advertisement -
- Advertisement -

ನವದೆಹಲಿ;ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಸಮಾಜವಾದಿ ನಾಯಕರಲ್ಲಿ ಒಬ್ಬರಾದ ಶರದ್ ಯಾದವ್ (75) ಗುರುವಾರ ನಿಧನರಾಗಿದ್ದಾರೆ. ಅವರು ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು . ನಿನ್ನೆ ದೆಹಲಿಯ ತಮ್ಮ ಮನೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಮನೆಯಲ್ಲಿ ಕುಸಿದು ಬೀಳುತ್ತಿದ್ದಂತೆ ಕೂಡಲೇ ಅವರನ್ನು ಗುರುಗ್ರಾಮ್‌ನ ಫೋರ್ಟಿಸ್ ಮೆಮೋರಿಯಲ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ಗೆ ಅವರನ್ನು ತಕ್ಷಣವೇ ಕರೆದೊಯ್ಯಲಾಯಿತು. ಈ ವೇಳೆ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು.ಪರೀಕ್ಷೆ ಬಳಿಕ‌ ವೈದ್ಯರು ಸಾವನ್ನು ದೃಢಪಡಿಸಿದ್ದಾರೆ‌.

ಹಿರಿಯ ರಾಜಕಾರಣಿ ಮತ್ತು ಜೆಡಿಯು ಮಾಜಿ ಮುಖ್ಯಸ್ಥ ಶರದ್ ಯಾದವ್ ಅವರ ನಿಧನಕ್ಕೆ ರಾಜಕೀಯ ಪಕ್ಷಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ. ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ಯಾದವ್ ಅವರ ನಿಧನದ ಬಗ್ಗೆ ಆಘಾತ ಮತ್ತು ದುಃಖ ವ್ಯಕ್ತಪಡಿಸಿದ್ದಾರೆ.ಅವರ ನಿಧನವು “ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ತುಂಬಲಾರದ ನಷ್ಟವನ್ನು ಉಂಟುಮಾಡಿದೆ ಎಂದು ಹೇಳಿದರು.

- Advertisement -

Latest News

error: Content is protected !!