Thursday, June 4, 2026
Homeಕರಾವಳಿಮಂಗಳೂರು: ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ ಶಾರೀಕ್ ಬೆಂಗಳೂರಿಗೆ ರವಾನೆ

ಮಂಗಳೂರು: ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ ಶಾರೀಕ್ ಬೆಂಗಳೂರಿಗೆ ರವಾನೆ

- Advertisement -
- Advertisement -

ಮಂಗಳೂರು: ನಾಗುರಿಯಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮುಹಮ್ಮದ್ ಶಾರಿಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ.

ನ.19ರಂದು ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಆರೋಪಿ ಶಾರಿಕ್ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ನಗರದ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಪೊಲೀಸ್ ನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಈ ನಡುವೆ ಆಸ್ಪತ್ರೆಯ ವೈದ್ಯರ ಶಿಫಾರಸಿನಂತೆ ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಶನಿವಾರ ಬೆಳಗ್ಗೆ 6 ಗಂಟೆಗೆ ಬೆಂಗಳೂರಿಗೆ ಕರೆದೊಯ್ಯಲಾಗಿದೆ’ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

- Advertisement -

Latest News

error: Content is protected !!