Monday, April 29, 2024
Homeಕರಾವಳಿಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ;ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆ ಶಾರೀಕ್ ನನ್ನು ಕಸ್ಟಡಿಗೆ ಪಡೆದ NIA...

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ;ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆ ಶಾರೀಕ್ ನನ್ನು ಕಸ್ಟಡಿಗೆ ಪಡೆದ NIA ಅಧಿಕಾರಿಗಳು

spot_img
- Advertisement -
- Advertisement -

ಬೆಂಗಳೂರು : ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆ ಆತನನ್ನು ಹೆಚ್ಚಿನ ವಿಚಾರಣೆಗಾಗಿ NIA ಅಧಿಕಾರಿಗಳು ಮಾರ್ಚ್ 15ರವರೆಗೆ ಕಸ್ಟಡಿಗೆ ಪಡೆದುಕೊಂಡಿದ್ದಾರೆ.


ಕುಕ್ಕರ್ ಬಾಂಬ್ ಸ್ಪೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಶಾರಿಕ್ ಮಂಗಳೂರಿನಲ್ಲಿ ಚಿಕಿತ್ಸೆ ನೀಡಲಾಗಿತ್ತು, ಆದರೆ ಆರೋಗ್ಯದಲ್ಲಿ ಚೇತರಿಕೆ ಕಾಣಿಸದ ಹಿನ್ನಲೆ 2022ರ ಡಿಸೆಂಬರ್‌ನಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಮೂರೂವರೆ ತಿಂಗಳು ಚಿಕಿತ್ಸೆ ಪಡೆದಿದ್ದ ಶಾರಿಕ್‌ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಈತನನ್ನು ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು.

ಶಾರಿಕ್ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಂತೆ ಎನ್ ಐ ಎ ಅಧಿಕಾರಿಗಳು, ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ‘ಸ್ಫೋಟದಿಂದ ಗಾಯಗೊಂಡಿದ್ದ ಶಾರಿಕ್‌ನನ್ನು ಇದುವರೆಗೂ ವಿಚಾರಣೆ ಮಾಡಿಲ್ಲ. ಈತ, ಭಯೋತ್ಪಾದನಾ ಸಂಘಟನೆ ಜೊತೆ ಗುರುತಿಸಿಕೊಂಡಿರುವ ಮಾಹಿತಿ ಇದೆ. ವಿಚಾರಣೆಗಾಗಿ ಈತನನ್ನು ಕಸ್ಟಡಿಗೆ ನೀಡಬೇಕು’ ಎಂದು ಎನ್‌ಐಎ ಅಧಿಕಾರಿಗಳು ಕೋರಿದರು. ಮನವಿ ಪುರಸ್ಕರಿಸಿದ ನ್ಯಾಯಾಲಯ, ಶಾರಿಕ್‌ನನ್ನು ಕಸ್ಟಡಿಗೆ ವಹಿಸಿತು.

 

- Advertisement -
spot_img

Latest News

error: Content is protected !!