- Advertisement -


- Advertisement -
ಮಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಇಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಮಂಗಳೂರಿನ ರೋಹನ್ ಕಾರ್ಪೊರೇಷನ್ ಸಂಸ್ಥೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಶಾರುಖ್ ಖಾನ್ ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಆನ್ ಇವನಿಂಗ್ ವಿತ್ ಶಾರುಖ್ ಖಾನ್ ಎಂಬ ಕಾರ್ಯಕ್ರಮವನ್ನು ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ಆಯೋಜನೆ ಮಾಡಲಾಗಿದ್ದು, ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.
ನಟ ಶಾರುಖ್ ಖಾನ್ ಭೇಟಿಯ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸರು ಅಗತ್ಯ ಭದ್ರತಾ ವ್ಯವಸ್ಥೆ ಕೈಗೊಂಡಿದ್ದಾರೆ.
ಪೂರ್ವ ನೋಂದಣಿ ಮಾಡಿದವರಿಗೆ ಮತ್ತು ಆಹ್ವಾನಿತರಿಗೆ ಮಾತ್ರ ಕಾರ್ಯಕ್ರಮಕ್ಕೆ ಪ್ರವೇಶಾವಕಾಶವಿದ್ದು, ಭದ್ರತಾ ದೃಷ್ಟಿಯಿಂದ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ.
- Advertisement -


