Friday, June 5, 2026
Homeಕರಾವಳಿಉಡುಪಿಉಡುಪಿ; ಹಿರಿಯ ಪತ್ರಕರ್ತ  ಶಶಿಧರ್ ಹೆಮ್ಮಣ್ಣ ವಿಧಿವಶ

ಉಡುಪಿ; ಹಿರಿಯ ಪತ್ರಕರ್ತ  ಶಶಿಧರ್ ಹೆಮ್ಮಣ್ಣ ವಿಧಿವಶ

- Advertisement -
- Advertisement -

ಉಡುಪಿ: ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ (57) ಹೃದಯಘಾತದಿಂದ ವಿಧಿವಶರಾಗಿದ್ದಾರೆ.

ನಿನ್ನೆ ಬೆಳಿಗ್ಗೆ  ಅವರು ಉಡುಪಿಯ ತಮ್ಮ  ಮನೆಯಲ್ಲಿದ್ದಾಗ ಧಿಢೀರ್ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ  ಅವರನ್ನು ನಗರದ ಆಸ್ಪತ್ರೆಗೆ ಕರೆದೊಯ್ದಾಗ ಹೃದಯಾಘಾತ ಆಗಿರುವುದು ಗೊತ್ತಾಗಿದೆ. ಕೂಡಲೇ  ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ  ಕರೆದೊಯ್ಯುತ್ತಿದ್ದಾಗ ತೀವ್ರ  ಅಸ್ವಸ್ಥ ಗೊಂಡಿದ್ದರು.ಮಣಿಪಾಲ ಅಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೆಮ್ಮಣ್ಣರವರು ನಿನ್ನೆ ರಾತ್ರಿ ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

1991 ರಲ್ಲಿ ಕುಂದಪ್ರಭ ಪತ್ರಿಕೆಯ ಮೂಲಕ ವೃತ್ತಿ ಜೀವನ ಅರಂಭಿಸಿದ  ಶಶಿಧರ್ – “ಕ್ಷಿತಿಜ” ಎನ್ನುವ ಸ್ವಂತ  ವಾರ ಪತ್ರಿಕೆ ಅರಂಭಿಸಿ , ಮುಖ್ಯ ಸಂಪಾದಕರಾಗಿದ್ದರು.ಬಳಿಕ ಈ ಟಿವಿ ಕನ್ನಡ ,ಡಿಡಿ ನ್ಯೂಸ್ ನಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.ಹಲವು ಉದಯೋನ್ಮುಕ ಪತ್ರಕರ್ತರಿಗೆ ಪ್ರೇರಕರಾಗಿದ್ದ ಹೆಮಣ್ಣ ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕೃಷಿ ಸಂಬಂಧಿತ ಲೇಖನಗಳನ್ನು ಬರೆದು ,ಸರಕಾರದ ಗಮನ ಸೆಳೆಯುವಲ್ಲಿ ಪ್ದಮುಖ ಪಾತ್ರ ವಹಿಸಿದ್ದರು‌.

ಇತ್ತೀಚೆಗಷ್ಟೇ ಕನೆಕ್ಟ್ ಮಿಡಿಯಾ ಸಂಸ್ಥೆಯನ್ನು ಹುಟ್ಟುಹಾಕಿ ,ಹಲವು ಯೋಜನೆಗಳನ್ನು ರಾಜ್ಯದಾದ್ಯಂತ ಆರಂಭಿಸುವ ಕಾರ್ಯ ದಲ್ಲಿ ತೊಡಗಿಸಿಕೊಂಡಿದ್ದರು. ಮೃತರು  ತಂದೆ ತಾಯಿ,ಪತ್ನಿ , ಪುತ್ರ , ನಾಲ್ಕು ಜನ ಸಹೋದರು ಹಾಗೂ ಸಹೋದರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಹಿರಿಯ ಪತ್ರಕರ್ತರ ನಿಧನಕ್ಕೆ ನಾಡಿನ ಗಣ್ಯರು ಕಂಬನಿ‌ ಮಿಡಿದಿದ್ದಾರೆ.

- Advertisement -

Latest News

error: Content is protected !!