Tuesday, May 14, 2024
Homeತಾಜಾ ಸುದ್ದಿಜೂನ್ 9ರಿಂದ ಭಕ್ತರಿಗಾಗಿ ತೆರೆಯಲಿದೆ ಶಬರಿಮಲೆ ಅಯ್ಯಪ್ಪ ದೇವಸ್ಥಾನ

ಜೂನ್ 9ರಿಂದ ಭಕ್ತರಿಗಾಗಿ ತೆರೆಯಲಿದೆ ಶಬರಿಮಲೆ ಅಯ್ಯಪ್ಪ ದೇವಸ್ಥಾನ

spot_img
- Advertisement -
- Advertisement -

ತಿರುವನಂತಪುರಂ: ಭಾರತದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಕೇರಳದ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಜೂನ್ 9 ರಿಂದ ಭಕ್ತರಿಗಾಗಿ ಕೇಂದ್ರದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಮತ್ತೆ ತೆರಯಲಾಗುವುದು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿರುವನಂತಪುರದಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆದರೆ ಕಟ್ಟು ನಿಟ್ಟಿನ ನಿಯಮ-ನಿರ್ಬಂಧಗಳು ಜಾರಿಯಲ್ಲಿರುತ್ತವೆ. ಇತರ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಂತೆ , ಕೇರಳದ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೂ ವೃದ್ಧರು ಮತ್ತು ಮಕ್ಕಳನ್ನು ಅನುಮತಿಸಲಾಗುವುದಿಲ್ಲ, ಆದರೆ ದೇವಾಲಯ ದರ್ಶನಕ್ಕೆ ಭಕ್ತರ ಸಂಖ್ಯೆಯ ಮೇಲೆ ಮಿತಿ ಇರುತ್ತದೆ.

ಹೀಗಾಗಿ 60,000 ಕ್ಕಿಂತ ಹೆಚ್ಚಿನ ಸಾಮಾನ್ಯ ಭಕ್ತರ ಪ್ರವೇಶಕ್ಕೆ ವಿರುದ್ಧವಾಗಿ ದಿನಕ್ಕೆ 6,000 ಭಕ್ತರಿಗೆ ಮಾತ್ರ ಅವಕಾಶ ನೀಡಲಾಗುವುದು ಮತ್ತು ಪರಸ್ಪರರ ನಡುವೆ ಆರು ಅಡಿ ಅಂತರ ಮತ್ತು ಮುಖಕ್ಕೆ ಮಾಸ್ಕ್‌ ಧರಿಸುವುದು ಸೇರಿದಂತೆ ಕೋವಿಡ್-19 ಮುನ್ನೆಚ್ಚರಿಕೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುವುದು ಎಂದು ತಿಳಿಸಲಾಗಿದೆ.

- Advertisement -
spot_img

Latest News

error: Content is protected !!