Monday, June 8, 2026
Homeತಾಜಾ ಸುದ್ದಿಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ: ಭಾರತಕ್ಕೆ ಆಗಮಿಸಿದ ಹಸೀನಾ

ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ: ಭಾರತಕ್ಕೆ ಆಗಮಿಸಿದ ಹಸೀನಾ

- Advertisement -
- Advertisement -

ಢಾಕಾ : ಬಾಂಗ್ಲಾದೇಶದ ಪ್ರಧಾನಿ ಹುದ್ದೆ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ. ವಿಶೇಷ ಉದ್ಯೋಗ ಕೋಟಾ ಕುರಿತು  ಅವಾಮಿ ಲೀಗ್ ಬೆಂಬಲಿಗರು ಮತ್ತು ಪ್ರತಿಭಟನಾಕಾರರ ನಡುವೆ ಹಿಂಸಾತ್ಮಕ ಘರ್ಷಣೆಗಳು ನಡೆಯುತ್ತಿರುವ ಹೊತ್ತಲ್ಲೇ ಶೇಖ್ ಹಸೀನಾ ಅವರು ಬಾಂಗ್ಲಾದೇಶದ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹಾಗಾಗಿ ಸದ್ಯ ಬಾಂಗ್ಲಾ ಸೇನೆಗೆ ಅಧಿಕಾರ ಹಸ್ತಾಂತರಿಸಲಾಗಿದೆ.

ಸೇನೆಯು ಮಧ್ಯಂತರ ಸರ್ಕಾರವನ್ನ ರಚಿಸಲಿದೆ ಮತ್ತು ಶಾಂತಿಯ ಹಾದಿಗೆ ಮರಳುವಂತೆ ಪ್ರತಿಭಟನಾಕಾರರಿಗೆ ಮನವಿ ಮಾಡಿದೆ ಎಂದು ಬಾಂಗ್ಲಾದೇಶ ಸೇನಾ ಮುಖ್ಯಸ್ಥ ಜನರಲ್ ವೇಕರ್-ಉಜ್-ಜಮಾನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇನ್ನು ರಾಜೀನಾಮೆ ನೀಡಿದ ಬೆನ್ನಲ್ಲೇ ಶೇಕ್ ಹಸೀನಾ ಭಾರತಕ್ಕೆ ಆಗಮಿಸಿದ್ದಾರೆ. ಭಾರತದ ತ್ರಿಪುರಾದಲ್ಲಿ ಅವ್ರ ಹೆಲಿಕಾಪ್ಟರ್ ಲ್ಯಾಂಡ್ ಆಗಿದ್ದು, ಅಜ್ಞಾತ ಸ್ಥಳಕ್ಕೆ ಅವ್ರನ್ನ ಬಿಎಸ್‍ಎಫ್ ಶಿಫ್ಟ್ ಮಾಡಿದೆ ಎನ್ನಲಾಗಿದೆ. ಅಲ್ಲದೇ , ಗಡಿ ಭದ್ರತಾ ಪಡೆ (BSF) ಭಾರತ-ಬಾಂಗ್ಲಾದೇಶ ಗಡಿಯ 4,096 ಕಿ.ಮೀ ಉದ್ದಕ್ಕೂ ಎಲ್ಲಾ ಘಟಕಗಳಿಗೆ ‘ಹೈ ಅಲರ್ಟ್’ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Latest News

error: Content is protected !!