Thursday, June 4, 2026
Homeಕರಾವಳಿಉಡುಪಿಕಾರ್ಕಳ : ಹಿರಿಯ ಪತ್ರಕರ್ತ, ಸಾಹಿತಿ ಶೇಖರ್‌ ಅಜೆಕಾರು ಹೃದಯಾಘಾತಕ್ಕೆ ಬಲಿ

ಕಾರ್ಕಳ : ಹಿರಿಯ ಪತ್ರಕರ್ತ, ಸಾಹಿತಿ ಶೇಖರ್‌ ಅಜೆಕಾರು ಹೃದಯಾಘಾತಕ್ಕೆ ಬಲಿ

- Advertisement -
- Advertisement -

ಕಾರ್ಕಳ : ಹಿರಿಯ ಪತ್ರಕರ್ತ, ಸಾಹಿತಿ ಶೇಖರ್‌ ಅಜೆಕಾರು (54) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮಂಗಳವಾರ ಬೆಳಿಗ್ಗೆ ಕಾರ್ಕಳ ಅಜೆಕಾರಿನ ತನ್ನ ಮನೆಯಲ್ಲಿ ಕುಸಿದು ಬಿದ್ದ ಶೇಖರ್‌ ಅವರನ್ನು ಕೂಡಲೇ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆ ತಂದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎನ್ನಲಾಗಿದೆ.
ಮುಂಬಯಿಯಲ್ಲಿ ಪತ್ರಿಕೋದ್ಯಮ ಪ್ರಾರಂಭಿಸಿದ ಶೇಖರ ಅಜೆಕಾರು ಅವರು, ಮುಂಬಯಿಯ ಕರ್ನಾಟಕ ಮಲ್ಲ ಪತ್ರಿಕೆಯಲ್ಲಿ ಉಪಸಂಪಾದಕರಾಗಿದ್ದರು. ಬಳಿಕ ಮಂಗಳೂರಿನ ಜನವಾಹಿನಿಗೆ ಸೇರಿದ್ದರು. ಅನಂತರ ಕನ್ನಡ ಪ್ರಭ ಸಹಿತ ಕೆಲವು ಪತ್ರಿಕೆಗಳಿಗೆ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.

ಶೇಖರ್‌ ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರಾಷ್ಟ್ರೀಯ ಬಸವಶ್ರೀ ಅವಾರ್ಡ್ 2018, ಕೃಷಿ ಬಂಧು 2019, ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪ್ರಶಸ್ತಿ 2019, ವಿಶ್ವ ದರ್ಶನ ಸಾಹಿತ್ಯ ಪ್ರಶಸ್ತಿ 2019, ಶಿಖಾ ಭಾರತ ಪ್ರಶಸ್ತಿ ಸೇರಿದಂತೆ ಹತ್ತಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

- Advertisement -

Latest News

error: Content is protected !!