Friday, May 17, 2024
Homeತಾಜಾ ಸುದ್ದಿಬಿಜೆಪಿಯ ಬಹುದೊಡ್ಡ ವಿಕೆಟ್ ಪತನ; ರಾಜೀನಾಮೆ ಘೋಷಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಬಿಜೆಪಿಯ ಬಹುದೊಡ್ಡ ವಿಕೆಟ್ ಪತನ; ರಾಜೀನಾಮೆ ಘೋಷಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

spot_img
- Advertisement -
- Advertisement -

ಹುಬ್ಬಳ್ಳಿ; ಚುನಾವಣೆಯ ಹೊತ್ತಲ್ಲೇ ಬಿಜೆಪಿಗೆ ಶಾಕ್ ಮೇಲೆ ಶಾಕ್ ಎದುರಾಗುತ್ತನೇ ಇದೆ. ಇದೀಗ ಕಮಲ ಪಡೆಯ ಬಹುದೊಡ್ಡ ವಿಕೇಟ್ ಪತನವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ, ಧರ್ಮೇಂದ್ರ ಪ್ರಧಾನ್ ಹಾಗೂ ಪ್ರಹ್ಲಾದ್ ಜೋಶಿ ಸೇರಿ ಜಗದೀಶ್ ಶೆಟ್ಟರ್ ಅವರನ್ನು ಮನವೊಲಿಸಲು ವಿಫಲವಾಗಿದ್ದು ಶೆಟ್ಟರ್ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಲು ಹೈಕಮಾಂಡ್ ಒಪ್ಪದ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ತೀವ್ರ ಅಸಮಾಧಾನಗೊಂಡಿದ್ದರು. ಅವರು ಈ ಅಸಮಾಧಾನವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸಿದ್ದರು.ಹೈಕಮಾಂಡ್ ಶೆಟ್ಟರ್ ಅವರ ಮನವಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಈಗ ಅವರು ಅನಿವಾರ್ಯವಾಗಿ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ಈಗ ಕೇಂದ್ರ ನಾಯಕರ ಜೊತೆಗಿನ ಸಂಧಾನ ವಿಫಲವಾದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಜಗದೀಶ್ ಶೆಟ್ಟರ್ ಇಂದು ಬೆಳಿಗ್ಗೆ ಶಿರಸಿಯಲ್ಲಿ ವಿಧಾನಸಭಾಧ್ಯಕ್ಷರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.ನನ್ನ ವಿರುದ್ದ ಷಡ್ಯಂತ್ರ ಮಾಡಿ ಟಿಕೆಟ್ ತಪ್ಪಿಸುವ ಕೆಲಸ ಮಾಡಲಾಗಿದೆ.ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ, ಆದರೆ ಪಕ್ಷೇತರನಾಗಿ ಸ್ಪರ್ಧಿಸಬೇಕೋ ಅಥವಾ ಬೇರೆ ನಿರ್ಧಾರ ಕೈಗೊಳ್ಳಬೇಕೆಂಬ ಬಗ್ಗೆ ಕಾರ್ಯಕರ್ತರ ಅಭಿಪ್ರಾಯ ಪಡೆದು ನಾಳೆ ತೀರ್ಮಾನ ಮಾಡುತ್ತೇನೆ” ಎಂದು ಅವರು ತಿಳಿಸಿದ್ದಾರೆ

- Advertisement -
spot_img

Latest News

error: Content is protected !!