ಬೆಳ್ತಂಗಡಿ : ಶಿಬಾಜೆಯಲ್ಲಿ ಯುವಕನಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ ಪ್ರಕರಣದ ಆರೋಪಿಗಳಿಬ್ಬರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ನಿವಾಸಿಗಳಾಗಿರುವ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಬಂಧಿತ ಆರೋಪಿಗಳು .
ಮೇ 15ರಂದು ಶಿಬಾಜೆಯ ಕುರುಂಜ ಮನೆಯ ಎದುರು ನಿಂತಿದ್ದ ವೆಲೆ ಸ್ಥಳೀಯ ನಿವಾಸಿ ಪ್ರವೀಣ್ ಎಂಬಾತನ ಮೇಲೆ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜರಿ ಹಲ್ಲೆಗೆ ಯತ್ನಿಸಿದ್ದಾರೆ. ಆನಂದ ಗೌಡ ಕೈಯಲ್ಲಿ ಕೊಡಲಿಯನ್ನು ಹಿಡಿದುಕೊಂಡು ಹಾಗೂ ತಿಮ್ಮಪ್ಪ ಪೂಜಾರಿ ಕಬ್ಬಿಣದ ಸಲಾಕೆಯನ್ನು ಹಿಡಿದು ಕೊಂಡು ಅವಾಚ್ಯವಾಗಿ ನಿಂದಿಸಿ ಜಾತಿ ನಿಂದನೆ ಮಾಡಿ ಹಲ್ಲೆ ಮಾಡಲು ಬಂದಿದ್ದು ಈ ವೇಳೆ ಪ್ರವೀಣ್ ಓಡಿ ತಪ್ಪಿಸಿಕೊಂಡು ಮನೆಯೊಳಗೆ ಹೋಗಿ ಬಾಗಿಲು ಹಾಕಿದ್ದಾನೆ ಈ ವೇಳೆ ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿದ ಆರೋಪಿಗಳು ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿರುವುದಾಗಿ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದರು.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಧರ್ಮಸ್ಥಳ ಪೊಲೀಸರು ಇಬ್ಬರು ಆರೋಪಿಗಳನ್ನು ಮೇ22 ರಂದು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.