Wednesday, June 3, 2026
Homeಕರಾವಳಿಬೆಳ್ತಂಗಡಿ: ನದಿಯಲ್ಲಿ ಮುಳುಗಿ ಯುವಕ ಸಾವು

ಬೆಳ್ತಂಗಡಿ: ನದಿಯಲ್ಲಿ ಮುಳುಗಿ ಯುವಕ ಸಾವು

- Advertisement -
- Advertisement -

ಬೆಳ್ತಂಗಡಿ: ಕಳೆಂಜ ಗ್ರಾಮದ ಮಾಣಿಂಗೇರಿ ಎಂಬಲ್ಲಿ ನದಿಯಲ್ಲಿ ಸ್ನಾನಕ್ಕೆ ಇಳಿದ ಯುವಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.

ಮೃತ ಯುವಕ ಕೊಯ್ಯೂರು ಗ್ರಾಮದ ನಿವಾಸಿ ಶಾಜಿ ಥಾಮಸ್ ಎಂಬವರ ಪುತ್ರ ಶಿಬಿನ್ (19) ಎಂದು ಗುರುತಿಸಲಾಗಿದೆ.

ಈತ ರಜೆಯಲ್ಲಿ ಮಾಣಿಂಗೇರಿಯ ತನ್ನ ಸಂಬಂಧಿಕರ ಮನೆಗೆ ಹೋಗಿದ್ದು, ಮಧ್ಯಾಹ್ನದ ಬಳಿಕ ಸಂಬಂಧಿಕ ಹುಡುಗರೊಂದಿಗೆ ಸ್ನಾನಕ್ಕೆಂದು ತೆರಳಿದ್ದ. ನದಿಗೆ ಇಳಿದ ಈತ ಈಜು ಬಾರದೆ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ಸ್ಥಳದಲ್ಲಿದ್ದ ಯುವಕರು ದೂರಿನಲ್ಲಿ ತಿಳಿಸಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೋಲೀಸರು ಸ್ಥಳಕ್ಕೆ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!