Friday, June 5, 2026
Homeಕರಾವಳಿಅಶ್ಲೀಲ ವಿಡಿಯೋ ನಿರ್ಮಾಣ ಆರೋಪ; ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ

ಅಶ್ಲೀಲ ವಿಡಿಯೋ ನಿರ್ಮಾಣ ಆರೋಪ; ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ

- Advertisement -
- Advertisement -

ಮುಂಬೈ; ಉದ್ಯಮಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ವಿಡಿಯೋ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಬಂಧಿಸಲಾಗಿದೆ.

ಮುಂಬೈ ಪೊಲೀಸರು ನಿನ್ನೆ ರಾತ್ರಿ ರಾಜ್ ಕುಂದ್ರಾ ಅವರನ್ನು ಬಂಧಿಸಿದ್ದಾರೆ. 2021ರ ಫೆಬ್ರವರಿಯಲ್ಲಿ ಮುಂಬೈ ಕ್ರೈಂ ಬ್ರ್ಯಾಂಚ್‌ನಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನವಾಗಿದೆ. ಪ್ರಕರಣದ ತನಿಖೆ ಮುಂದುವರೆದಿದೆ.

ಅಶ್ಲೀಲ ವಿಡಿಯೋಗಳನ್ನು ಮಾಡಿ ಅದನ್ನು ಮೊಬೈಲ್ ಅಪ್ಲಿಕೇಶನ್ ಮೂಲಕ ಬಿಡುಗಡೆ ಮಾಡಿದ ಆರೋಪದ ಮೇಲೆ ರಾಜ್ ಕುಂದ್ರಾ ಬಂಧನವಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ಪೊಲೀಸರು ಇಂದು ರಾಜ್ ಕುಂದ್ರಾ ಬಂಧಿಸಿದ್ದಾರೆ.

ರಾಜ್ ಕುಂದ್ರಾ ಬಂಧನದ ಕುರಿತು ಮುಂಬೈ ಪೊಲೀಸರು ಪ್ರತಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಅಶ್ಲೀಲ ವಿಡಿಯೋ ತಯಾರಿಕೆ ಮತ್ತು ಅದನ್ನು ಮೊಬೈಲ್ ಅಪ್ಲಿಕೇಶನ್ ಮೂಲಕ ಬಿಡುಗಡೆ ಮಾಡಿದ ಕುರಿತು ಪ್ರಕರಣ ದಾಖಲಾಗಿತ್ತು.

ಮುಂಬೈ ಅಪರಾಧ ವಿಭಾಗದಲ್ಲಿ 2021ರ ಫೆಬ್ರವರಿಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ 19/7/2021ರಂದು ರಾಜ್ ಕುಂದ್ರಾ ಬಂಧಿಸಲಾಗಿದೆ. ವಿಡಿಯೋ ತಯಾರಿಕೆಯಲ್ಲಿ ಅವರ ಪಾತ್ರವಿರುವ ಕುರಿತು ನಮ್ಮ ಬಳಿ ಸಾಕ್ಷ್ಯಗಳಿವೆ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

- Advertisement -

Latest News

error: Content is protected !!