Sunday, May 19, 2024
Homeತಾಜಾ ಸುದ್ದಿಶಿವಮೊಗ್ಗ-ಬೆಂಗಳೂರು ವಿಮಾನಯಾನ ಸೇವೆ ಇಂದಿನಿಂದ ವಿಧ್ಯುಕ್ತ ಆರಂಭ

ಶಿವಮೊಗ್ಗ-ಬೆಂಗಳೂರು ವಿಮಾನಯಾನ ಸೇವೆ ಇಂದಿನಿಂದ ವಿಧ್ಯುಕ್ತ ಆರಂಭ

spot_img
- Advertisement -
- Advertisement -

ಬೆಂಗಳೂರು: ಶಿವಮೊಗ್ಗದಲ್ಲಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆಗಳು ಇಂದಿನಿಂದ ಆರಂಭವಾಗಲಿವೆ.

ಇಂಡಿಗೋ ಸಂಸ್ಥೆಯ ವಿಮಾನವು ಇಂದು ಬೆಳಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 11.05ಕ್ಕೆ ಶಿವಮೊಗ್ಗ ತಲುಪಲಿದೆ. ಮೊದಲ ಯಾನದಲ್ಲಿ ಮೂಲ ಸೌಕರ್ಯ ಇಲಾಖೆ ಸಚಿವ ಎಂ.ಬಿ. ಪಾಟೀಲ್, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಮಾಜಿ‌ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಮಲೆನಾಡು ಭಾಗದ ಜನಪ್ರತಿನಿಧಿಗಳು ಪ್ರಯಾಣಿಸಲಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಳಿದೊಡನೆಯೇ ವಾಟರ್‍‌ ಸೆಲ್ಯೂಟ್‌ ಮೂಲಕ ಸಂಭ್ರಮಾಚರಣೆ ನಡೆಯಲಿದೆ.

ಶಿವಮೊಗ್ಗ ಏರ್ ಪೋರ್ಟ್ ರಾಜ್ಯದ ಮಲೆನಾಡು ಭಾಗದಲ್ಲಿ ನಿರ್ಮಾಣವಾಗಿರುವ ಪ್ರಪ್ರಥಮ ವಿಮಾನ ನಿಲ್ದಾಣವಾಗಿದ್ದು, 450 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗದಿಂದ 15 ಕಿ.ಮೀ. ದೂರದಲ್ಲಿರುವ ಸೋಗಾನೆ ಎಂಬಲ್ಲಿ 779 ಎಕರೆ ಜಾಗದಲ್ಲಿ ನಿರ್ಮಾಣವಾಗಿದೆ.

ಏರ್‌ಪೋರ್ಟ್ ನಲ್ಲಿ ನೈಟ್‌ ಲ್ಯಾಂಡಿಂಗ್‌ ಸೌಲಭ್ಯ ಕೂಡಾ ಇದ್ದು, 4,340 ಚದರ ಮೀಟರ್ ವಿಸ್ತೀರ್ಣದ ಪ್ರಯಾಣಿಕರ ಟರ್ಮಿನಲ್‌ ಮತ್ತು 3,050 ಮೀಟರ್ ಉದ್ದದ ರನ್‌ವೇ ಯನ್ನು ಒಳಗೊಂಡಿದೆ.

- Advertisement -
spot_img

Latest News

error: Content is protected !!