Friday, June 5, 2026
Homeಕರಾವಳಿಮಂಗಳೂರುಮಂಗಳೂರಿನಿಂದ ಲಕ್ಷದ್ವೀಪಕ್ಕೆ ಸರಕು ಸಾಗಿಸುತ್ತಿದ್ದ ಹಡಗು ಮುಳುಗಡೆ

ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಸರಕು ಸಾಗಿಸುತ್ತಿದ್ದ ಹಡಗು ಮುಳುಗಡೆ

- Advertisement -
- Advertisement -

ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಸರಕು ಸಾಗಿಸುತ್ತಿದ್ದ ಹಡಗು ಮುಳುಗಡೆಯಾಗಿದೆ. ಸರಕು ಸಾಗಣೆ ಹಡಗು 2025ರ ಮೇ 12ರಂದು ಮಂಗಳೂರು ಬಂದರಿನಿಂದ ಲಕ್ಷದ್ವೀಪದತ್ತ ಪ್ರಯಾಣ ಆರಂಭಿಸಿತ್ತು ಮೇ.18ರಂದು ಲಕ್ಷದ್ವೀಪದ ಕಡಮತ್ ದ್ವೀಪಕ್ಕೆ ತಲುಪಬೇಕಾಗಿತ್ತು . ಹಡಗಿನಲ್ಲಿ 06 ಭಾರತೀಯ ಸಿಬ್ಬಂದಿ ಮತ್ತು ಸಿಮೆಂಟ್ ಹಾಗೂ ನಿರ್ಮಾಣ ಸಾಮಗ್ರಿ ಇದ್ದು ಸಮುದ್ರ ಮಧ್ಯೆ ತಾಂತ್ರಿಕ ಸಮಸ್ಯೆಯಿಂದ ನೀರು ನುಗ್ಗಿದ್ದು, ಹಡಗು ಮುಳುಗಿದೆ. ಈ ವೇಳೆ ಎಲ್ಲಾ 06 ಸಿಬ್ಬಂದಿ ಹಡಗಿನಿಂದ ಹಾರಿ ಸಣ್ಣ ಡಿಂಗಿ ಬೋಟಿನಲ್ಲಿ ಪ್ರಾಣ ಉಳಿಸಿಕೊಂಡಿದ್ದಾರೆಂದು ತಿಳಿದಿದೆ.

ಭಾರತೀಯ ಕರಾವಳಿ ರಕ್ಷಣಾ ಪಡೆಗೆ ಬಂದ ಮಾಹಿತಿ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯ ನಡೆಸಿದ್ದು ಗಸ್ತು ತಿರುಗುತ್ತಿದ್ದ ಕೋಸ್ಟ್ ಗಾರ್ಡ್ ನ ‘ವಿಕ್ರಂ’ ಶಿಪ್ ನಲ್ಲಿ ರಕ್ಷಣಾ ಕಾರ್ಯ ನಡೆಸಿದ್ದು ಇಸ್ಮಾಯಿಲ್ ಶರೀಫ್, ಅಲೆಮನ್ ಅಹ್ಮದ್ ಬಾಯ್ ಗಾವ್ಡ, ಕಾಕಲ್ ಸುಲೇಮಾನ್ ಇಸ್ಮಾಯಿಲ್, ಅಕ್ಬರ್ ಅಬ್ದುಲ್ ಸುರಾನಿ, ಕಸಂ ಇಸ್ಮಾಯಿಲ್ ಮತ್ತು ಅಜ್ಮಲ್ ರಕ್ಷಣೆ ಮಾಡಲಾಗಿದೆಂದು ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!