Thursday, June 4, 2026
Homeತಾಜಾ ಸುದ್ದಿಕೋಟ್ಯಂತರ ರೂ.ವಂಚನೆ ಆರೋಪ : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ತಾಯಿ ಸುನಂದಾ ಶೆಟ್ಟಿಗೆ...

ಕೋಟ್ಯಂತರ ರೂ.ವಂಚನೆ ಆರೋಪ : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ತಾಯಿ ಸುನಂದಾ ಶೆಟ್ಟಿಗೆ ಬಂಧನದ ಭೀತಿ !!

- Advertisement -
- Advertisement -

ಮುಂಬೈ : ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಅವರ ತಾಯಿ ಸುನಂದಾ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದೀಗ ತಾಯಿ-ಮಗಳು ಬಂಧನದ ಭೀತಿಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಲಕ್ನೋದ ಹಜರತ್‌ಗಂಜ್ ಮತ್ತು ವಿಭೂತಿಖಂಡ್ ಪೊಲೀಸ್ ಠಾಣೆಗಳಲ್ಲಿ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ನಟನೆಯ ಹೊರತಾಗಿ ಶಿಲ್ಪಾ ಶೆಟ್ಟಿ ಐಯೋಸಿಸ್ ವೆಲ್ನೆಸ್ ಸೆಂಟರ್ ಹೆಸರಿನ ಫಿಟ್ನೆಸ್ ಕೇಂದ್ರವನ್ನು ನಡೆಸುತ್ತಿದ್ದು, ಇದಕ್ಕೆ ಶಿಲ್ಪಾ ಶೆಟ್ಟಿ ಮುಖ್ಯಸ್ಥೆಯಾಗಿದ್ದರೆ, ಅವರ ತಾಯಿ ಸುನಂದಾ ನಿರ್ದೇಶಕಿ ಆಗಿದ್ದಾರೆ. ಅದರ ಶಾಖೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ತೆರೆಯುವುದಾಗಿ ಹೇಳಿ ಇಬ್ಬರು ವ್ಯಕ್ತಿಗಳಿಂದ ಕೋಟ್ಯಂತರ ರೂಪಾಯಿ ಪಡೆದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಕುರಿತು ಜೋಸ್ನಾ ಚೌಹಾಣ್​ ಮತ್ತು ರೋಹಿತ್​ ವೀರ್​ ಸಿಂಗ್​ ಎಂಬುವವರು ಲಖನೌನ ಹಜರತ್​ಗಂಜ್​ ಮತ್ತು ವಿಭೂತಿ ಖಂಡ್​​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಪ್ರಕರಣದ ವಿಚಾರಣೆ ನಡೆಸಲು ಲಖನೌ ಪೊಲೀಸರು ಮುಂಬೈಗೆ ಆಗಮಿಸಿದ್ದಾರೆ ಎಂಬ ಮಾಹಿತಿ ಕೇಳಿಬಂದಿದ್ದು, ಒಂದು ವೇಳೆ ಶಿಲ್ಪಾ ಶೆಟ್ಟಿ ಮತ್ತು ಸುನಂದಾ ಶೆಟ್ಟಿ ಮೋಸ ಮಾಡಿರುವುದಕ್ಕೆ ಸೂಕ್ತ ಸಾಕ್ಷಿ ಸಿಕ್ಕರೆ, ಅವರನ್ನು ಪೊಲೀಸರು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

- Advertisement -

Latest News

error: Content is protected !!