Friday, June 5, 2026
Homeತಾಜಾ ಸುದ್ದಿಶಿರಾ ಉಪಚುನಾವಣೆ: ಕಾಂಗ್ರೆಸ್ ನಿಂದ ಟಿ.ಬಿ.ಜಯಚಂದ್ರ ಹೆಸರು ಫೈನಲ್

ಶಿರಾ ಉಪಚುನಾವಣೆ: ಕಾಂಗ್ರೆಸ್ ನಿಂದ ಟಿ.ಬಿ.ಜಯಚಂದ್ರ ಹೆಸರು ಫೈನಲ್

- Advertisement -
- Advertisement -

ಶಿರಾ: ಶಿರಾ ಉಪಚುನಾವಣೆಗೆ ಕೊನೆಗೂ ಕಾಂಗ್ರೆಸ್ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರನ್ನು ಅಖೈರುಗೊಳಿಸಿ ಆಯ್ಕೆ ಪ್ರಕ್ರಿಯೆ ಅಂತಿಮಗೊಳಿಸಿದೆ. ಆ ಮೂಲಕ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರನ್ನು ಸಮಾಧಾನಗೊಳಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.

ಬುಧವಾರದಿಂದಲೇ ಕಾಂಗ್ರೆಸ್ ಕ್ಷೇತ್ರದಲ್ಲಿ ಪ್ರಚಾರಕ್ಕೆ ಧುಮುಕಲಿದ್ದು, ಚುನಾವಣೆಯ ಜವಾಬ್ದಾರಿಯನ್ನು ಕೆಪಿಸಿಸಿ ಮಾಜಿ ಅಧ್ಯಕ್ಷ ತುಮಕೂರು ಕಾಂಗ್ರೆಸ್ ಮುಖಂಡ ಡಾ.ಜಿ.ಪರಮೇಶ್ವರ್ ಗೆ ವಹಿಸಲಾಗಿದೆ. ಟಿ.ಬಿ.ಜಯಚಂದ್ರ ಪರ ರಾಜಣ್ಣ ಪ್ರಚಾರಕ್ಕೆ ಇಳಿಯುವಂತೆ ಕೆಪಿಸಿಸಿ ಸೂಚಿಸಿದೆ.

ಈ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ತುಮಕೂರು ಜಿಲ್ಲೆಯ ನಾಯಕರ ಜೊತೆ ಸಭೆ ಮಾಡಿದ್ದೇವೆ. ಶಿರಾ ಉಪ ಚುನಾವಣೆಯನ್ನು ಪರಮೇಶ್ವರ್ ಅವರ ನೇತೃತ್ವತ್ವದಲ್ಲಿ ನಡೆಸುತ್ತೇವೆ. ರಾಜಣ್ಣ ಕೋ ಚೇರ್ಮನ್ ಆಗಿ ಸಾಥ್ ಕೊಡುತ್ತಾರೆ. ಪಕ್ಷದ ಅಭ್ಯರ್ಥಿಯಾಗಿ ಜಯಚಂದ್ರ ಇರುತ್ತಾರೆ. ರಾಜಣ್ಣನವರೇ ಜಯಚಂದ್ರ ಹೆಸರು ಸೂಚಿಸಿದ್ದಾರೆ. ಅವರ ಅಭಿಪ್ರಾಯವನ್ನು ನಾವು ಪಡೆದಿದ್ದೇವೆ. ನಮ್ಮ ವರಿಷ್ಠರಿಗೆ ಇದನ್ನೇ ಕಳಿಸಿಕೊಡುತ್ತೇವೆ. ಇಂದಿನಿಂದಲೇ ಚುನಾವಣೆ ಕಾರ್ಯ ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದರು.

ಇಂದು ಬೆಳಗ್ಗೆ ತಾನೇ ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ್ದ ರಾಜಣ್ಣ, ನಾನು ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಜೊತೆ ಮಾತನಾಡಿ ಬಂದಿದ್ದೇನೆ. ಶಿರಾ ಕ್ಷೇತ್ರದಲ್ಲಿ ಹಿಂದುಳಿದ ಸಮುದಾಯಕ್ಕೆ ಟಿಕೆಟ್ ಕೊಡಬೇಕು ಅನ್ನೋದು ನನ್ನ ಅಭಿಪ್ರಾಯ. ಪಕ್ಷ ಅಭ್ಯರ್ಥಿಗಳಿಗೆ ಟಿಕೆಟ್ ಕೊಡುವ ಜೊತೆಗೆ ಚುನಾವಣೆಗಾಗಿ ದುಡ್ಡು ಕೂಡ ಕೊಡಬೇಕು ಎಂದು ಹೇಳಿದ್ದರು. ಆದರೆ ಸಭೆ ನಂತರ ಅಧ್ಯಕ್ಷರ ಅಭಿಪ್ರಾಯಕ್ಕೆ ನಾವೆಲ್ಲರೂ ಸಾಥ್ ನೀಡುತ್ತೇವೆ ಎಂದು ಉಲ್ಟಾ ಹೊಡೆದಿದ್ದಾರೆ.

- Advertisement -

Latest News

error: Content is protected !!