Friday, June 5, 2026
Homeತಾಜಾ ಸುದ್ದಿಶಿರಾ ಉಪಚುನಾವಣೆಯ 'JDS ಅಭ್ಯರ್ಥಿಗೆ ಕೊರೋನಾ ಪಾಸಿಟಿವ್

ಶಿರಾ ಉಪಚುನಾವಣೆಯ ‘JDS ಅಭ್ಯರ್ಥಿಗೆ ಕೊರೋನಾ ಪಾಸಿಟಿವ್

- Advertisement -
- Advertisement -

ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಶಾಸಕ ಸತ್ಯನಾರಾಯಣರ ನಿಧನದ ನಂತರ ತೆರವಾಗಿರುವ ಶಾಸಕ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಜೆಡಿಎಸ್ ಅಭ್ಯರ್ಥಿಯಾಗಿ ದಿವಂಗತ ಶಾಸಕ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ ಅವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಇಂದು ಘೋಷಣೆ ಮಾಡಿದ್ದರು. ಇದೇ ಸಂದರ್ಭದಲ್ಲಿ ಶಿರಾ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ಅವರ ಪುತ್ರ ಸತ್ಯಪ್ರಕಾಶ್, ಕಳೆದ ಮೂರು ದಿನಗಳಿಂದ ನಮ್ಮ ತಾಯಿ ಅಮ್ಮಾಜಮ್ಮ ಮೈಕೈನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಅವರು ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದರು. ಇಂತಹ ಕೊರೋನಾ ಪರೀಕ್ಷೆಯ ವರದಿ ಬಂದಿದ್ದು, ಅವರಿಗೊ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.

- Advertisement -

Latest News

error: Content is protected !!