Monday, May 20, 2024
Homeಕರಾವಳಿಉಡುಪಿಶಿರಾಡಿ ಘಾಟ್ ಈಗ ಎಲ್ಲಾ ತರಹದ ವಾಹನ ಸಂಚಾರಕ್ಕೆ ಮುಕ್ತ;ಲಘು ವಾಹನಗಳಿಗೆ ಏಕ ಮುಖ ಸಂಚಾರಕ್ಕೆ...

ಶಿರಾಡಿ ಘಾಟ್ ಈಗ ಎಲ್ಲಾ ತರಹದ ವಾಹನ ಸಂಚಾರಕ್ಕೆ ಮುಕ್ತ;ಲಘು ವಾಹನಗಳಿಗೆ ಏಕ ಮುಖ ಸಂಚಾರಕ್ಕೆ ಮಾತ್ರ ಅವಕಾಶ

spot_img
- Advertisement -
- Advertisement -

ಹಾಸನ: ಶಿರಾಡಿ ಘಾಟ್ ರಸ್ತೆಯಲ್ಲಿ ಎಲ್ಲಾ ತರಹದ ವಾಹನಗಳು ಸಂಚಾರಕ್ಕೆ ಮುಕ್ತವಾಗಿದೆ ಎಂದು ಹಾಸನ ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಿದ್ದಾರೆ.

ಆಗಸ್ಟ್ 22 ರಿಂದ ಲಘುವಾಹನಗಳು ಮತ್ತು ಭಾರಿ ವಾಹನಗಳಿಗೆ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಸಂಚರಿಸಲು ಮುಕ್ತ ಅವಕಾಶ ನೀಡಲಾಗಿದೆ.

ಇಲ್ಲಿನ ಸಕಲೇಶಪುರದ ದೋಣಿಗಲ್ ಎಂಬಲ್ಲಿ ರಸ್ತೆ ಕುಸಿದ ಪರಿಣಾಮ ವಾಹನ ಸಂಚಾರಕ್ಕೆ ತಡೆ ಒಡ್ಡಲಾಗಿತ್ತು.ಕಳೆದ ಕೆಲವು ದಿನಗಳಿಂದ ಶಿರಾಡಿ ಘಾಟ್​ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದ್ದು,ವಾಹನ ಸವಾರರು ಬದಲಿ ರಸ್ತೆಯಲ್ಲಿ ಸಂಚಾರ ಮಾಡುವ ಅನಿವಾರ್ಯತೆ ಉಂಟಾಗಿತ್ತು. ಆದರೆ, ನಿನ್ನೆ ಚಾರ್ಮಾಡಿ ಘಾಟ್​ನಲ್ಲೂ ರಾತ್ರಿ ಸಂಚಾರಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದ್ದು,ಘನ ವಾಹನಗಳ ಪ್ರಯಾಣವನ್ನು ನಿರ್ಬಂಧಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಪರದಾಟ ಮತ್ತಷ್ಟು ಹೆಚ್ಚಾಗಿದ್ದು, ರಾತ್ರಿ ಪ್ರಯಾಣ ಮಾಡುವವರು ಬದಲಿ ಮಾರ್ಗವಾಗಿ ಮಡಿಕೇರಿ ಮೂಲಕವೇ ಸಂಚಾರ ನಡೆಸಬೇಕಿತ್ತು. ಹೀಗಾಗಿ ಶಿರಾಡಿ ಘಾಟ್ ರಸ್ತೆಯಲ್ಲಿ ಸಂಚರಿಸಲು ಮುಕ್ತ ಅವಕಾಶ ನೀಡಲಾಗಿದೆ.

ಸದ್ಯ ಸ್ಥಳ ಪರಿಶೀಲನೆ ಮಾಡಿರುವ ಸಚಿವ ಆರ್.ಅಶೋಕ್ ಒಂದು ತಿಂಗಳಲ್ಲಿ ಸಂಪೂರ್ಣ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ. ಸಕಲೇಶಪುರದ ದೋಣಿಗಾಲ್ ನಲ್ಲಿ ಕಂದಾಯ ಸಚಿವ ಅಶೋಕ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಶಿರಾಡಿ ಘಾಟ್‌ ರಸ್ತೆ ಇಂದಿನಿಂದಲೇ ಸಂಚಾರಕ್ಕೆ ಮುಕ್ತವಾಗಲಿದೆ. ಆದರೆ, ಲಘು ವಾಹನಗಳಿಗೆ ಏಕ ಮುಖ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮುಂದೆ, ಒಂದು ತಿಂಗಳಲ್ಲಿ ಸಂಪೂರ್ಣ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸ್ಥಳ ಪರಿಶೀಲನೆ ಬಳಿಕ ಸಚಿವ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ.

- Advertisement -
spot_img

Latest News

error: Content is protected !!