- Advertisement -
- Advertisement -
ಶಿರಾಡಿ: ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರೊಂದು ಪಲ್ಟಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಸಮೀಪದ ಕೊಡ್ಯಕಲ್ಲು ಎಂಬಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಅನಿಲ ಸಾಗಾಟ ಮಾಡುತ್ತಿದ್ದ ಬುಲೆಟ್ ಟ್ಯಾಂಕರ್ ಕೊಡ್ಯಕಲ್ಲು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಬದಿಗೆ ಪಲ್ಟಿಯಾಗಿದೆ. ಘಟನೆಯಲ್ಲಿ ಲಾರಿ ಚಾಲಕ ಅಪಾಯದಿಂದ ಪಾರಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ.
ಗ್ಯಾಸ್ ಸೋರಿಕೆ ಆಗುತ್ತಿಲ್ಲ. ಆದರೂ ಪೋಲೀಸರು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದು,ತೆರವು ಕಾರ್ಯಾಚರಣೆ ನಡೆಯುತ್ತಿದೆ.
- Advertisement -