Saturday, June 6, 2026
Homeಉತ್ತರ ಕನ್ನಡಉತ್ತರಕನ್ನಡ: ಶಿರೂರು ಗುಡ್ಡ ಕುಸಿತ ಪ್ರಕರಣ; ಶೋಧ ಕಾರ್ಯಾಚರಣೆಗೆ ಮಿಲಿಟರಿ ಪಡೆ ಸಹಕಾರ

ಉತ್ತರಕನ್ನಡ: ಶಿರೂರು ಗುಡ್ಡ ಕುಸಿತ ಪ್ರಕರಣ; ಶೋಧ ಕಾರ್ಯಾಚರಣೆಗೆ ಮಿಲಿಟರಿ ಪಡೆ ಸಹಕಾರ

- Advertisement -
- Advertisement -

ಉತ್ತರಕನ್ನಡ: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಕಾಣೆಯಾದವರ ಶೋಧ ಕಾರ್ಯಾಚರಣೆಗೆ  ಮಿಲಟರಿ ಪಡೆ ಕೂಡ ಸಹಕಾರ ನೀಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

46 ಜನ ಹಾಗೂ 44 ಜನ ಮಿಲಿಟರಿಯವರು ಹಾಗೂ ನೌಕಾಪಡೆ ಯವರೂ ಕೂಡ ಕೈಜೋಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ಗೋವಾ ಮತ್ತು ಅಂಕೋಲಾ ನಡುವೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಜುಲೈ 16 ರಂದು ಭೂ ಕುಸಿತವಾಗಿದೆ. ಭೂ ಕುಸಿತದಿಂದ 10 ಜನ ಕಾಣೆಯಾಗಿದ್ದಾರೆ. ಅದರಲ್ಲಿ ಏಳು ಜನರ ಹೆಣಗಳು ಪತ್ತೆಯಾಗಿದ್ದು ಇನ್ನೂ ಮೂವರು ಕಾಣೆಯಾಗಿದ್ದು ಅವರ ಪತ್ತೆಗಾಗಿ ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಘಟನೆಯಲ್ಲಿ ಖಾಲಿ ಗ್ಯಾಸ್ ಟ್ಯಾಂಕರ್ ಹಾಗೂ ಭರ್ತಿಯಾಗಿರುವ ಗ್ಯಾಸ್ ಟ್ಯಾಂಕರ್ ಕೂಡ ಸಿಕ್ಕಿಹಾಕಿಕೊಂಡಿದ್ದು, ಅಲ್ಲಿಯೇ ವಾಸವಾಗಿರುವ ಒಂದೇ ಕುಟುಂಬದವರು ಟೀ ಅಂಗಡಿಯನ್ನು ಇಟ್ಟುಕೊಂಡಿದ್ದರು. ಅವರಲ್ಲಿ ಐವರು ಭೂ ಕುಸಿತದಲ್ಲಿ ಸಾವನ್ನಪ್ಪಿದ್ದಾರೆ. ರಿಸ್ಕ್ ಆಪರೇಶನ ನ್ನು ತ್ವರಿತವಾಗಿ ಮಾಡಬೇಕೆಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸ್ಪಷ್ಟವಾಗಿ ಸೂಚಿಸಿದ್ದೇನೆ ಎಂದರು.

- Advertisement -

Latest News

error: Content is protected !!