Friday, May 17, 2024
Homeತಾಜಾ ಸುದ್ದಿಶಿವಾಜಿ, ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಸಿ - ಬೆಳಗಾವಿಯಲ್ಲಿ ಉದ್ವಿಗ್ನ ವಾತಾವರಣ, ಸೆಕ್ಷನ್ 144 ನಿಷೇಧಾಜ್ಞೆ...

ಶಿವಾಜಿ, ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಸಿ – ಬೆಳಗಾವಿಯಲ್ಲಿ ಉದ್ವಿಗ್ನ ವಾತಾವರಣ, ಸೆಕ್ಷನ್ 144 ನಿಷೇಧಾಜ್ಞೆ ಜಾರಿ

spot_img
- Advertisement -
- Advertisement -

ಬೆಳಗಾವಿ: ಒಂದು ಕಡೆ ಬೆಂಗಳೂರಿನಲ್ಲಿ ಶಿವಾಜಿ ಮೂರ್ತಿಗೆ ಅವಮಾನ ಮಾಡಿದ ಪ್ರಕರಣದ ಹಿನ್ನೆಲೆ ಶುಕ್ರವಾರ ರಾತ್ರಿ ಬೆಳಗಾವಿಯ ಸಂಭಾಜಿ ವೃತ್ತದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಇನ್ನೊಂದು ಕಡೆ ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ. ಈ ಎರಡು ಪ್ರಕರಣಗಳು ನಗರವನ್ನು ತಲ್ಲಣಗೊಳಿಸಿದೆ. ಈ ಘಟನೆಗಳ ಸಂಬಂಧ ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಿ, ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಇದರಲ್ಲಿ ಭಾಗಿಯಾದ 27 ಪುಂಡರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕೋರ್ಟ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿ ಶಿವಾಜಿ ಮಹಾರಾಜ್ ಪುತ್ಥಳಿಗೆ ಕಿಡಿಗೇಡಿಗಳು ಅವಮಾನ ಮಾಡಿದ ಘಟನೆ ಖಂಡಿಸಿ ಶುಕ್ರವಾರ ತಡರಾತ್ರಿ ಬೆಳಗಾವಿಯ ಧರ್ಮವೀರ್ ಸಂಭಾಜಿ ಸರ್ಕಲ್‍ನಲ್ಲಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.

ಈ ವೇಳೆ ಪೊಲೀಸ್ ವಾಹನ ಸೇರಿ ಸಾರ್ವಜನಿಕರ 20ಕ್ಕೂ ಹೆಚ್ಚು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಂಇಎಸ್ ಸೇರಿದಂತೆ ಇನ್ನಿತರ ಸಂಘಟನೆಗಳ ಎಂಇಎಸ್‍ನ 27 ಪುಂಡರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದರು.ಇವರೆಲ್ಲರನ್ನು ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಸೂಚಿಸಿದ್ದಾರೆ. ರಾಷ್ಟ್ರಭಕ್ತರ ಪ್ರತಿಮೆಗಳನ್ನು ಧ್ವಂಸಗೊಳಿಸುವುದು ಸರಿಯಲ್ಲ. ಕೆಲವೇ ಕಲ ಪುಂಡರು ಈ ರೀತಿ ಮಾಡುತ್ತಿದ್ದಾರೆ. ಅಂತವರನ್ನು ಸದೆಬಡಿಯುವುದಾಗಿ ತಿಳಿಸಿದರು.

- Advertisement -
spot_img

Latest News

error: Content is protected !!