Monday, July 1, 2024
Homeತಾಜಾ ಸುದ್ದಿಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ; ದೂರು ನೀಡಿದ ಸೂರಜ್ ರೇವಣ್ಣ ಆಪ್ತನೇ ನಾಪತ್ತೆ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ; ದೂರು ನೀಡಿದ ಸೂರಜ್ ರೇವಣ್ಣ ಆಪ್ತನೇ ನಾಪತ್ತೆ

spot_img
- Advertisement -
- Advertisement -

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಗಾಲೇ ವಿಧಾನ ಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣ ಅವರನ್ನು ನಿನ್ನೆ ಅರೆಸ್ಟ್ ಮಾಡಲಾಗಿದೆ. ಸೂರಜ್ ಅರೆಸ್ಟ್ ಆಗುತ್ತಿದ್ದಂತೆ ಅವರ ಆಪ್ತ ಶಿವಕುಮಾರ್ ನಾಪತ್ತೆಯಾಗಿದ್ದಾರೆ.

ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬರುತ್ತಿದ್ದಂತೆ ಸೂರಜ್ ಪರವಾಗಿ ಅವರ ಆಪ್ತ ಶಿವಕುಮಾರ್ ದೂರು ನೀಡಿದ್ದರು. ಆದರೆ ಸೂರಜ್ ಅರೆಸ್ಟ್ ಆಗುತ್ತಿದ್ದಂತೆ  ಶಿವಕುಮಾರ್ ನಾಪತ್ತೆಯಾಗಿದ್ದಾರೆ. ಅವರ ಸಂಪರ್ಕ ಸಾಧ್ಯವಾಗುತ್ತಿಲ್ಲ. ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಶಿವಕುಮಾರ್ ನಾಪತ್ತೆಯಾಗಿದ್ದಾರೆ.

ಸೂರಜ್‌ ಪರ ಯುವಕರು ಅವರನ್ನು ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಎನ್ನುವಾತ ಸಂತ್ರಸ್ತನ ವಿರುದ್ಧ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈಗ ಅವರೇ ನಾಪತ್ತೆಯಾಗಿದ್ದಾರೆ.

- Advertisement -
spot_img

Latest News

error: Content is protected !!