- Advertisement -
![]()
- Advertisement -
ನವದೆಹಲಿ: ಕೇಂದ್ರ ಸರ್ಕಾರದ ಪ್ರಸಾದ್ ಯೋಜನೆಯಡಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವನ್ನು ಸೇರಿಸುವಂತೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇದ್ರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ನವದೆಹಲಿಯಲ್ಲಿ ಇಂದು ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ ಸಂಸದ ರಾಘವೇಂದ್ರ, ಅಡಿಕೆ ಬೆಳೆಗಾರರಿಗೆ ಅನುಕೂಲವಾಗಲು ನಬಾರ್ಡ್ ಸಹಾಯಧನ ಬಾಕಿ ಉಳಿದ ಹಣವನ್ನು ಶೀಘ್ರ ಬಿಡುಗಡೆ ಮಾಡಲು ಮನವಿ ಮಾಡಿದ್ದಾರೆ.
ಅಲ್ಲದೇ, ಶಿವಮೊಗ್ಗ, ಮಂಗಳೂರು ಹಾಗೂ ಉಡುಪಿ ಸಿಜಿಹೆಚ್ಎಸ್ ಕ್ಷೇಮ ಕೇಂದ್ರಗಳಿಗೆ ಹುದ್ದೆಗಳ ಮಂಜೂರಾತಿ ಹಾಗೂ ಅನುದಾನ ಬಿಡುಗಡೆ ಮಾಡಲು ಅನುಮೋದನೆ ನೀಡುವಂತೆಯೂ ಬಿ.ವೈ. ರಾಘವೇಂದ್ರ ಮನವಿ ಮಾಡಿದ್ದಾರೆ.
- Advertisement -


