Thursday, June 4, 2026
Homeತಾಜಾ ಸುದ್ದಿಸೋದರ ಸಂಬಂಧಿಯಿಂದ ಅತ್ಯಾಚಾರ!.. ಗರ್ಭಿಣಿ, ಅಪ್ರಾಪ್ತ ಬಾಲಕಿ ಆತ್ಮಹತ್ಯೆ

ಸೋದರ ಸಂಬಂಧಿಯಿಂದ ಅತ್ಯಾಚಾರ!.. ಗರ್ಭಿಣಿ, ಅಪ್ರಾಪ್ತ ಬಾಲಕಿ ಆತ್ಮಹತ್ಯೆ

- Advertisement -
- Advertisement -

ಶಿವಮೊಗ್ಗ: ಇಲ್ಲಿನ ರಿಪ್ಪನ್ ಪೇಟೆ ಸಮೀಪದ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಕುವಳ್ಳಿ ಗ್ರಾಮದಲ್ಲಿ 16 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಬಾಲಕಿ ದೊಡ್ಡಮ್ಮನ ಮಗನಿಂದ ಅತ್ಯಾಚಾರಕ್ಕೆ ಒಳಗಾಗಿದ್ದು ಡೆತ್ ನೋಟ್ ನಲ್ಲಿ ವಿಷಯ ಬರೆದಿಟ್ಟು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ತೀರ್ಥಹಳ್ಳಿ ತಾಲೂಕಿನ ಗ್ರಾಮವೊಂದರ ನಿವಾಸಿಯಾಗಿರುವ ರಾಘವೇಂದ್ರ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಮೋಸಮಾಡಿದ್ದಾನೆ. ಬಾಲಕಿ 5 ತಿಂಗಳ ಗರ್ಭಿಣಿ ಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಡೆತ್ ನೋಟ್ ಆಧರಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!