Wednesday, June 3, 2026
Homeಕರಾವಳಿಉಡುಪಿಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದಲೇ ಸ್ಪರ್ಧೆ; ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ...

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದಲೇ ಸ್ಪರ್ಧೆ; ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ಸ್ಪಷ್ಟನೆ

- Advertisement -
- Advertisement -

ಉಡುಪಿ; ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದಲೇ ಸ್ಪರ್ಧೆ ಮಾಡೋದಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ನಾನು ಉಡುಪಿ ಚಿಕ್ಕಮಗಳೂರು ಬಿಟ್ಟು ಬೇರೆ ಲೋಕಸಭಾ ಕ್ಷೇತ್ರಕ್ಕೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಮತ್ತೆ ಸ್ಪಷ್ಟಪಡಿಸಿದ್ದಾರೆ.


ಚುನಾವಣಾ ಕಚೇರಿ ಉದ್ಘಾಟನೆ ಬಳಿಕ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ‘ಸ್ವಂತ ಜಿಲ್ಲೆ ಅಲ್ಲವಾದರೂ ಉಡುಪಿ–ಚಿಕ್ಕಮಗಳೂರು ಕ್ಷೇತ್ರದ ಮತದಾರರು ಎರಡು ಬಾರಿ ನನ್ನನ್ನು ಗೆಲ್ಲಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿಯೂ ಉಡುಪಿ –ಚಿಕ್ಕಮಗಳೂರು ಕ್ಷೇತ್ರದಿಂದಲೇ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಅಂತಿಮವಾಗಿ ಪಕ್ಷದ ನಿರ್ಧಾರಕ್ಕೆ ಬದ್ಧವಾಗಿರುತ್ತೇನೆ’ ಎಂದರು. ರಾಜ್ಯದ ಐದಾರು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಕುರಿತು ಮಾಧ್ಯಮಗಳಲ್ಲಿ ನನ್ನ ಹೆಸರು ಕೇಳಿಬರುತ್ತಿದ್ದು, ಬೇರೆಲ್ಲಿಯೂ ಸ್ಪರ್ಧಿಸುವ ಮನಸ್ಸಿಲ್ಲ’ ಎಂದರು. ಈ ಕ್ಷೇತ್ರದಲ್ಲಿ ನಾನು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ, ಅವುಗಳ ಆಧಾರದಲ್ಲಿಯೇ ನಾನು ಮತ ಕೇಳುತ್ತೇನೆ ಎಂದರು. ಆದರೆ ಪಕ್ಷ ಹೇಳಿದರೆ, ಬೇರೆ ಕ್ಷೇತ್ರಕ್ಕೆ ಹೋಗುವಂತೆ ಸೂಚನೆ ನೀಡಿದರೆ ಅದಕ್ಕೂ ನಾನು ಬದ್ಧಳಿದ್ದೇನೆ ಎಂದಿದ್ದಾರೆ.

- Advertisement -

Latest News

error: Content is protected !!