Thursday, June 4, 2026
Homeತಾಜಾ ಸುದ್ದಿರಾಹುಲ್ ಗಾಂಧಿಗೆ ಚಿಕಿತ್ಸೆ ಅಗತ್ಯವಿದೆ: ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ

ರಾಹುಲ್ ಗಾಂಧಿಗೆ ಚಿಕಿತ್ಸೆ ಅಗತ್ಯವಿದೆ: ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ

- Advertisement -
- Advertisement -

ಚಿಕ್ಕಮಗಳೂರು: ಬ್ರಿಟಿಷರನ್ನು ಓಡಿಸಿದವರಿಗೆ ಮೋದಿಯನ್ನು ಓಡಿಸುವುದು ಕಷ್ಟವಲ್ಲ ಎಂಬ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ, ರಾಹುಲ್ ಗಾಂಧಿ ಕಾಲಿಟ್ಟಲ್ಲೆಲ್ಲಾ ಕಾಂಗ್ರೆಸ್ ನೆಲಕಚ್ಚುತ್ತಿದೆ. ಪದೇ-ಪದೇ ಸೋಲುವುದರಿಂದ ಅವರಿಗೆ ಬುದ್ಧಿ ಭ್ರಮಣೆಯಾಗಿದೆ. ಹಾಗಾಗಿ ರಾಹುಲ್ ಗಾಂಧಿಗೆ ಸೂಕ್ತ ಚಿಕಿತ್ಸೆಯ ಅಗತ್ಯವಿದೆ ಎಂದು ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಲೋಕಸಭೆಯಲ್ಲಿ ಅಧಿಕೃತ ವಿರೋಧ ಪಕ್ಷವಾಗಿಯೂ ಉಳಿದಿಲ್ಲ. ವಂಶಾಡಳಿತ, ದುರಾಡಳಿತ, ಭ್ರಷ್ಟಾಚಾರದಿಂದ ನೀವು ಜನರಿಂದಲೇ ನಾಶವಾಗಿದ್ದೀರಾ. ಮತ್ತೆ ಸರ್ವನಾಶವಾಗುತ್ತಿರಿ. ಯಾವ ರಾಜ್ಯದಲ್ಲೂ ಕಾಂಗ್ರೆಸ್ ಅಸ್ತಿತ್ವ ಉಳಿಯುವುದಿಲ್ಲ. ಮುಂಬರುವ 4 ರಾಜ್ಯಗಳ ಚುನಾವಣೆಯಲ್ಲೂ ಕಾಂಗ್ರೆಸ್ಸಿಗೆ ಸೋಲು ಕಟ್ಟಿಟ್ಟಬುತ್ತಿ ಎಂದು ಶೋಭಾ ಕರಂದ್ಲಾಜೆ ಭವಿಷ್ಯ ನುಡಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ ನಾನಾ ರೀತಿಯ ನಾಟಕವಾಡುತ್ತಾರೆ. ಪಾರ್ಲಿಮೆಂಟ್ ಚುನಾವಣೆ ನಡೆದಾಗ ವಿದೇಶಕ್ಕೆ ಓಡಿ ಹೋಗುತ್ತಾರೆ. ಈಗ ಚುನಾವಣೆಗಾಗಿ ನೀರಿಗಿಳಿಯೋದು, ಹಾಡುವುದು ನೃತ್ಯ ಮಾಡುವುದರಿಂದ ಜನರನ್ನು ಸೆಳೆ ಮತ ಕಬಳಿಸಬಹುದು ಎಂದು ಅಂದುಕೊಂಡಿದ್ದಾರೆ. ಅದು ಅವರ ಪೆದ್ದುತನ ಎಂದು ಶೋಭಾ ವ್ಯಂಗ್ಯವಾಡಿದರು.

- Advertisement -

Latest News

error: Content is protected !!