Thursday, June 4, 2026
Homeತಾಜಾ ಸುದ್ದಿಅಶ್ವಿನಿ ಪುನೀತ್ ರಾಜಕುಮಾರ್ ಭೇಟಿ ಮಾಡಿ ಚುನಾವಣೆಯಲ್ಲಿ ಸಹಕಾರ ಕೋರಿದ ಶೋಭಾ ಕರಂದ್ಲಾಜೆ

ಅಶ್ವಿನಿ ಪುನೀತ್ ರಾಜಕುಮಾರ್ ಭೇಟಿ ಮಾಡಿ ಚುನಾವಣೆಯಲ್ಲಿ ಸಹಕಾರ ಕೋರಿದ ಶೋಭಾ ಕರಂದ್ಲಾಜೆ

- Advertisement -
- Advertisement -

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಂದು ಚುನಾವಣೆಯಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರ ಬೆಂಬಲ ಕೋರಿದ್ದಾರೆ.

ಬೆಂಗಳೂರಿನ‌ ಸದಾಶಿವನಗರದಲ್ಲಿರುವ ದಿ. ಚಲನಚಿತ್ರ ನಟ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದ ಶೋಭಾ ಕರಂದ್ಲಾಜೆ ಅಶ್ವಿನಿ ಅವರ ಜೊತೆ ಮಾತುಕತೆ ನಡೆಸಿದರು.

ಭೇಟಿ ವೇಳೆ ಚುನಾವಣೆಯಲ್ಲಿ ಬಿಜೆಪಿಗೆ ಸಹಕಾರ ನೀಡುವಂತೆ ಶೋಭಾ ಕರಂದ್ಲಾಜೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಲ್ಲಿ ಮನವಿ ಮಾಡಿದ್ದಾರೆ‌.

ಈ ವೇಳೆ ಮಲ್ಲೇಶ್ವರಂ ಶಾಸಕ ಮತ್ತು ಮಾಜಿ ಡಿಸಿಎಂ ಡಾ. ಸಿ.ಎನ್. ಅಶ್ವಥ್ ನಾರಾಯಣ ಕೂಡಾ ಉಪಸ್ಥಿತರಿದ್ದರು.

ಅಶ್ವಿನಿ ಪುನೀತ್ ರಾಜ್ ಕುಮಾರ್ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮತದಾರರೂ ಆಗಿದ್ದಾರೆ.

- Advertisement -

Latest News

error: Content is protected !!