- Advertisement -
![]()
- Advertisement -
ಉಡುಪಿ: ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಡುಪಿಯಲ್ಲಿ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ.
ಲವ್ ಜಿಹಾದ್ ನಮ್ಮ ಹೆಣ್ಣುಮಕ್ಕಳನ್ನು ನರಕದ ಕೂಪಕ್ಕೆ ತಳ್ಳುವ ಪ್ರಕ್ರಿಯೆ. ಪ್ರೀತಿಯ ಹೆಸರಲ್ಲಿ ಮದುವೆಯಾಗುತ್ತಾರೆ ಅಥವಾ ಮದುವೆಯಾಗದೆ ಮೋಸ ಮಾಡುತ್ತಾರೆ. ಕೈಗೊಂದು ಮಗುವನ್ನು ಕೊಟ್ಟು ಓಡಿ ಹೋಗುತ್ತಾರೆ. ನಂತರ ತಲಾಖ್ ಎಂದು ಹೇಳಿ ಇನ್ನೊಬ್ವರನ್ನು ಮದುವೆಯಾಗುತ್ತಾರೆ. ದೇಶದ ಅನೇಕ ಭಾಗಗಳಲ್ಲಿ ನಮ್ಮ ಹೆಣ್ಣುಮಕ್ಕಳು ಸಮಸ್ಯೆ ಎದುರಿಸುತ್ತಿದ್ದಾರೆ.ಲವ್ ಜಿಹಾದ್ ಒಂದು ಪಿಡುಗು ತಕ್ಷಣ ಕೊನೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಲವ್ ಜಿಹಾದಿಗೆ ಹೆಣ್ಣುಮಕ್ಕಳು ಬಲಿಯಾದರೆ ತಂದೆ-ತಾಯಿಯ ದುಃಖ ಕೇಳುವವರ್ಯಾರು?. ಲವ್ ಜಿಹಾದ್ ತಡೆಗೆ ಬಲವಾದ ಕಾನೂನು ಜಾರಿ ಮಾಡುವ ಅಗತ್ಯ ಇದೆ. ಹಿಂದಿನಿಂದಲೂ ಈ ಬಗ್ಗೆ ವಾದ ಮಾಡಿಕೊಂಡು ಬಂದಿದ್ದೇನೆ ಎಂದಿದ್ದಾರೆ,
- Advertisement -


