Monday, June 29, 2026
Homeಕರಾವಳಿಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಇಲಾಖೆ ರಾಜ್ಯ ಸಚಿವೆಯಾಗಿ ಶೋಭಾ ಕರಂದ್ಲಾಜೆ ಅಧಿಕಾರ ಸ್ವೀಕಾರ

ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಇಲಾಖೆ ರಾಜ್ಯ ಸಚಿವೆಯಾಗಿ ಶೋಭಾ ಕರಂದ್ಲಾಜೆ ಅಧಿಕಾರ ಸ್ವೀಕಾರ

- Advertisement -
- Advertisement -

ನವದೆಹಲಿ: ಕೇಂದ್ರ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಕಲ್ಯಾಣ ಇಲಾಖೆಗಳ ರಾಜ್ಯ ಸಚಿವೆಯಾಗಿ ಶೋಭಾ ಕರಂದ್ಲಾಜೆ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಇಲಾಖೆ ಸಚಿವ ಜಿತನ್ ರಾಂ ಮಾಂಝಿ ಮತ್ತು ಕಾರ್ಮಿಕ ಕಲ್ಯಾಣ ಇಲಾಖೆ ಸಚಿವ ಡಾ. ಮನ್ ಸುಖ್ ಮಾಂಡವೀಯಾ ಅವರ ಉಪಸ್ಥಿತಿಯಲ್ಲಿ ಶೋಭಾ ಕರಂದ್ಲಾಜೆ ಅಧಿಕಾರ ಸ್ವೀಕರಿಸಿದರು.

ಇದೇ ವೇಳೆ ನವದೆಹಲಿಗೆ ತೆರಳಿರುವ ರಾಜ್ಯದ ಹಲವು ಬಿಜೆಪಿ ಮುಖಂಡರು ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ನಿನ್ನೆ ರಾತ್ರಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎಲ್ಲಾ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದರು.ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ವಿ. ಸೋಮಣ್ಣ ಕೂಡಾ ಇಂದು ತಮ್ಮ ಕಚೇರಿಗಳಲ್ಲಿ ತಮ್ಮ ಇಲಾಖೆಗಳ ಅಧಿಕಾರ ಸ್ವೀಕರಿಸಿದರು.

- Advertisement -

Latest News

error: Content is protected !!