Thursday, June 4, 2026
Homeಕರಾವಳಿಮಂಗಳೂರುಎರಡನೇ ಬಾರಿಗೆ ಕೇಂದ್ರ ಸಚಿವೆಯಾಗಿ ಶೋಭಾ ಕರಂದ್ಲಾಜೆ ಪ್ರಮಾಣ ವಚನ ಸ್ವೀಕಾರ

ಎರಡನೇ ಬಾರಿಗೆ ಕೇಂದ್ರ ಸಚಿವೆಯಾಗಿ ಶೋಭಾ ಕರಂದ್ಲಾಜೆ ಪ್ರಮಾಣ ವಚನ ಸ್ವೀಕಾರ

- Advertisement -
- Advertisement -

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಬೆಂಗಳೂರು ಉತ್ತರ ಸಂಸದೆ ಶೋಭಾ ಕರಂದ್ಲಾಜೆ ರಾಜ್ಯ ದರ್ಜೆ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದರು.

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಶೋಭಾ ಕರಂದ್ಲಾಜೆ ಅವರಿಗೆ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

ಮೂರನೇ ಬಾರಿಗೆ ಸಂಸದೆಯಾಗಿರುವ ಶೋಭಾ ಕರಂದ್ಲಾಜೆ ಎರಡನೇ ಬಾರಿಗೆ ಕೇಂದ್ರ ಸಚಿವೆಯಾಗಿದ್ದು, ಬೆಂಗಳೂರಿನ ಮೊದಲ ಮಹಿಳಾ ಸಂಸದೆ ಎಂಬ ಹೆಗ್ಗಳಿಕೆಯನ್ನೂ ಹೊಂದಿದ್ದಾರೆ.

ಕಳೆದ ಬಾರಿ ಶೋಭಾ ಕರಂದ್ಲಾಜೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ರಾಜ್ಯ ಸಚಿವೆಯಾಗಿ ಕಾರ್ಯನಿರ್ವಹಿಸಿದ್ದರು.

ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ, ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮತ್ತು ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

- Advertisement -

Latest News

error: Content is protected !!